ಕೋಲ್ಕತಾ : ಕಳೆದ ತಿಂಗಳು ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಸಿಬಿಐ ತನಿಖಾ ವರದಿಯಲ್ಲಿ ತಿಳಿಸಿದೆ ಎಂದು ವರದಿಯಾಗಿದೆ.
ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು, ಮುಖ್ಯ ಆರೋಪಿ ಸಂಜಯ್ ರಾಯ್ ವಿರುದ್ಧ “ವಾಟರ್ ಟೈಟ್ ಚಾರ್ಜ್ ಶೀಟ್” ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿದ್ದಾರೆ. ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ-ಕೊಲೆಯಲ್ಲಿ ರಾಯ್ ಒಬ್ಬನೆ ಭಾಗಿಯಾಗಿದ್ದಾನೆ ಎಂದು ಸೂಚಿಸುವ ಡಿಎನ್ಎ ಮತ್ತು ವಿಧಿವಿಜ್ಞಾನ ವರದಿಗಳು ಸಾಮೂಹಿಕ ಅತ್ಯಾಚಾರವನ್ನು ತಳ್ಳಿಹಾಕಿವೆ ಆಗಸ್ಟ್ 27 ರಂದು ವರದಿ ಆಗಿತ್ತು.
ವೈದ್ಯೆಯ ಅತ್ಯಾಚಾರ ಪ್ರಕರಣದಲ್ಲಿ ಬೇರೆ ಯಾವುದೇ ವ್ಯಕ್ತಿಯ ಪಾಲ್ಗೊಳ್ಳುವಿಕೆಯನ್ನು ಸೂಚಿಸಲು ಇಲ್ಲಿಯವರೆಗೆ ಯಾವುದೇ ಪುರಾವೆಗಳಿಲ್ಲ ಎಂದು ಮೂಲಗಳು ತಿಳಿಸಿವೆ.