ನವದೆಹಲಿ: ಒಲಂಪಿಕ್ಸ್ ನಲ್ಲಿ ಪದಕ ವಂಚಿತ ವಿನೇಶ್ ಪೋಗಟ್ ಅವರು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷ ಸೇರುವ ಮುನ್ನವೇ ತಾವು ಕರ್ತವ್ಯ ನಿರ್ವಹಿಸುತ್ತಿದ್ದಂತ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಅವಧಿಯಾಗಿದೆ ಎಂದಿದ್ದಾರೆ.
ನನ್ನ ಜೀವನದ ಈ ಹಂತದಲ್ಲಿ, ನಾನು ರೈಲ್ವೆ ಸೇವೆಯಿಂದ ಹಿಂದೆ ಸರಿಯಲು ಮತ್ತು ನನ್ನ ರಾಜೀನಾಮೆ ಪತ್ರವನ್ನು ಭಾರತೀಯ ರೈಲ್ವೆಯ ಸಕ್ಷಮ ಅಧಿಕಾರಿಗಳಿಗೆ ಸಲ್ಲಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಯಾವಾಗಲೂ ಭಾರತೀಯ ರೈಲ್ವೆ ಕುಟುಂಬಕ್ಕೆ ಕೃತಜ್ಞನಾಗಿರುತ್ತೇನೆ ಎಂದು ತಿಳಿಸಿದ್ದಾರೆ.
भारतीय रेलवे की सेवा मेरे जीवन का एक यादगार और गौरवपूर्ण समय रहा है।
जीवन के इस मोड़ पर मैंने स्वयं को रेलवे सेवा से पृथक करने का निर्णय लेते हुए अपना त्यागपत्र भारतीय रेलवे के सक्षम अधिकारियों को सौप दिया है। राष्ट्र की सेवा में रेलवे द्वारा मुझे दिये गये इस अवसर के लिए मैं… pic.twitter.com/HasXLH5vBP
— Vinesh Phogat (@Phogat_Vinesh) September 6, 2024
BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora