ಬೆಂಗಳೂರು: ಎತ್ತಿನಹೊಳೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಪಂಪ್ ಹೌಸ್ ನೀರೆತ್ತುವ ಕಾರ್ಯಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಿದರು.
ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡನಗರದಲ್ಲಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ವಿತರಣಾ ತೊಟ್ಟಿ 3ರ (DC-3) ಪಂಪ್ ಹೌಸ್ ನಲ್ಲಿ ನೀರೆತ್ತುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಪರಮೇಶ್ವರ್, ಎಂ. ಬಿ ಪಾಟೀಲ್, ಕೆ.ಎನ್ ರಾಜಣ್ಣ, ಶಾಸಕರಾದ ಶರತ್ ಬಚ್ಚೇಗೌಡ, ಶಿವಲಿಂಗೇಗೌಡ, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora