ಬೆಂಗಳೂರು : ಸದ್ಯ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ತಂದಿದೆ. ಇದರ ಮಧ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.
ಹೌದು ಇಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಅಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿದೆ. ಸೂರತ್ನಿಂದ 100 ರೂಪಾಯಿ ಬೆಲೆಯ ಸೀರೆಗಳನ್ನು ಹೆಚ್ಚಿನ ಬೆಲೆ ನೀಡಿ ಸುಮಾರು 10 ಲಕ್ಷ ಸೀರೆಗಳನ್ನು ತರಿಸಲಾಗಿತ್ತು. ಈ ಕುರಿತು ವಿಧಾನ ಪರಿಷತ್ ಅಲ್ಲಿ ಮೋಟಮ್ಮ ಅವರು ವಿರೋಧ ಪಕ್ಷದ ನಾಯಕರಾಗಿ ಇದ್ದಾಗ ಈ ವಿಚಾರದ ಬಗ್ಗೆ ಚರ್ಚೆಯಾಗಿದೆ.
ಈ ಹಗರಣದ ಬಗ್ಗೆ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಗರಣ ಹಾಗೂ ಮುಡಾ ಹಗರಣ ವಿಪಕ್ಷಗಳಿಗೆ ಪ್ರಮುಖ ಅಸ್ತ್ರಗಳಾಗಿದ್ದು, ಇದರ ಬೆನ್ನಲ್ಲೇ ಇದೀಗ ಬಿಜೆಪಿ ವಿರುದ್ಧವೇ ಭಾಗ್ಯಲಕ್ಷ್ಮಿ ಯೋಜನೆ ಅಡಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಇದೀಗ ಬಿಜೆಪಿಗೆ ಕಾಂಗ್ರೆಸ್ ಯಾವ ರೀತಿ ತಿರುಗೇಟು ನೀಡುತ್ತೆ ಎಂಬುದರ ಕುರಿತು ಕಾದು ನೋಡಬೇಕಾಗಿದೆ.