Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ‘LET’ ಕಮಾಂಡರ್ ಸೈಫುಲ್ಲಾ ಖಾಲಿದ್ ಗುಂಡಿಕ್ಕಿ ಹತ್ಯೆ!

18/05/2025 6:01 PM

BREAKING: ಪಾಕಿಸ್ತಾನದಲ್ಲಿ ಬೆಂಗಳೂರಿನ ಐಐಎಸ್ಸಿ ದಾಳಿಕೋರ ಸೈಪುಲ್ಲಾ ಗುಂಡಿಕ್ಕಿ ಹತ್ಯೆ | Razullah Nizamani AKA Abu Saifullah

18/05/2025 5:51 PM

BREAKING: ಜಮ್ಮು-ಕಾಶ್ಮೀರದಲ್ಲಿ ಸೇನೆ, ಪೊಲೀಸರ ಭರ್ಜರಿ ಕಾರ್ಯಾಚರಣೆ: 42 ಜೀವಂತ ಬಾಂಬ್ ನಿಷ್ಕ್ರೀಯ

18/05/2025 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ‘ಗಣೇಶೋತ್ಸವ’ದಲ್ಲಿ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ
KARNATAKA

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ‘ಗಣೇಶೋತ್ಸವ’ದಲ್ಲಿ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ

By kannadanewsnow0906/09/2024 4:23 PM

ಬೆಂಗಳೂರು: ನಾಳೆಯಿಂದ ಗಣೇಶ ಚತುರ್ಥಿ ಹಬ್ಬ ಆರಂಭಗೊಳ್ಳಲಿದೆ. ರಾಜ್ಯ, ದೇಶ, ವಿದೇಶದಲ್ಲೂ ಮೂಷಿಕನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕರು ಗಣೇಶೋತ್ಸವದ ವೇಳೆಯಲ್ಲಿ ಕಡ್ಡಾಯವಾಗಿ ಈ ಕೆಲ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸರ್ಕಾರದ ಖಡಕ್ ಸೂಚನೆ ನೀಡಿದೆ.

ಈ ಕುರಿತಂತೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಗಣೇಶೋತ್ಸವದ ವೇಳೆ ಸುರಕ್ಷತೆಗೂ ಕಾಳಜಿ ವಹಿಸಬೇಕು. ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಸೂಚಿಸಿದ್ದು, ತಪ್ಪದೇ ಪಾಲಿಸುವ ಮೂಲಕ ವಿದ್ಯುತ್‌ ಅವಘಡಗಳನ್ನು ತಪ್ಪಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.#GaneshChaturthi2024 @CMofKarnataka @siddaramaiah… pic.twitter.com/EJ3AHrKWIX

— DIPR Karnataka (@KarnatakaVarthe) September 5, 2024

ಸುರಕ್ಷತಾ ಕ್ರಮಗಳು:

* ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.
* ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
* ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.
* ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.
* ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.
•ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.
* ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

ತಾತ್ಕಲಿಕ ಸಂಪರ್ಕದ ಮಾಹಿತಿ:

*ತಾತ್ಕಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.
*ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.
*ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.
*ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

BREAKING: CBSEಯಿಂದ 10 ಮತ್ತು 12ನೇ ತರಗತಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಅಂಕ ಯೋಜನೆ ಬಿಡುಗಡೆ | CBSE releases sample question papers

BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora

Good News : ವಾಹನ ಸವಾರರಿಗೆ ಸಿಹಿ ಸುದ್ದಿ ; ‘ಕೇಂದ್ರ ಸರ್ಕಾರ’ದಿಂದ ಶೀಘ್ರ ‘ಪೆಟ್ರೋಲ್, ಡಿಸೇಲ್ ಬೆಲೆ’ ಇಳಿಕೆ ; ವರದಿ

Share. Facebook Twitter LinkedIn WhatsApp Email

Related Posts

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM3 Mins Read

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM1 Min Read

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM1 Min Read
Recent News

BREAKING : ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ‘LET’ ಕಮಾಂಡರ್ ಸೈಫುಲ್ಲಾ ಖಾಲಿದ್ ಗುಂಡಿಕ್ಕಿ ಹತ್ಯೆ!

18/05/2025 6:01 PM

BREAKING: ಪಾಕಿಸ್ತಾನದಲ್ಲಿ ಬೆಂಗಳೂರಿನ ಐಐಎಸ್ಸಿ ದಾಳಿಕೋರ ಸೈಪುಲ್ಲಾ ಗುಂಡಿಕ್ಕಿ ಹತ್ಯೆ | Razullah Nizamani AKA Abu Saifullah

18/05/2025 5:51 PM

BREAKING: ಜಮ್ಮು-ಕಾಶ್ಮೀರದಲ್ಲಿ ಸೇನೆ, ಪೊಲೀಸರ ಭರ್ಜರಿ ಕಾರ್ಯಾಚರಣೆ: 42 ಜೀವಂತ ಬಾಂಬ್ ನಿಷ್ಕ್ರೀಯ

18/05/2025 5:41 PM

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM
State News
KARNATAKA

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

By kannadanewsnow0918/05/2025 5:28 PM KARNATAKA 3 Mins Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ…

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM

BREAKING : ಸ್ಟೇಡಿಯಂಗೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಳ್ಳುತ್ತೇನೆ : ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕ ಅರೆಸ್ಟ್, ‘FIR’ ದಾಖಲು!

18/05/2025 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.