Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.10ರಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ
KARNATAKA

ಸೆ.10ರಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಸೆ. 10 ರಿಂದ ಏರ್ಪಡಿಸಲಾಗಿದೆ.

ಸೆಪ್ಟೆಂಬರ್ 10 ರಂದು ನೆಹರು ಕ್ರೀಡಾಂಗಣದಲ್ಲಿ, ಸೆಪ್ಟೆಂಬರ್ 14 ರಂದು ನೆಹರೂ ಮೈದಾನ, ಸಾಗರದಲ್ಲಿ, ಸೆಪ್ಟೆಂಬರ್ 15 ರಂದು ವಿ.ಐ.ಎಸ್.ಎಲ್ ಕ್ರೀಡಾಂಗಣ ಭದ್ರಾವತಿ ಮತ್ತು ಸೊರಬ ತಾಲ್ಲೂಕಿನ ಆನವಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣ, ಸೆಪ್ಟೆಂಬರ್ 17 ರಂದು ತಾಲ್ಲೂಕು ಕ್ರೀಡಾಂಗಣ ಶಿಕಾರಿಪುರ ಮತ್ತು ತಾಲ್ಲೂಕು ಕ್ರೀಡಾಂಗಣ ಹೊಸನಗರದಲ್ಲಿ, ಸೆಪ್ಟೆಂಬರ್ 18 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ತೀರ್ಥಹಳ್ಳಿಯಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ನಿಯಮಗಳು:

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗುವುದು. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ / ಆಯ್ಕೆ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.

ಆಯಾ ತಾಲ್ಲೂಕಿನ ಕ್ರೀಡಾಪಟುಗಳು ಆಯಾ ತಾಲ್ಲೂಕಿನಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಮೂಲ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ಬೇರೆ ತಾಲ್ಲೂಕಿನ ಆಟಗಾರರು ಭಾಗವಹಿಸಬೇಕಾದರೆ ಆ ತಾಲ್ಲೂಕಿನಲ್ಲಿ ಅವರು ಶಿಕ್ಷಣ ಪಡೆಯುತ್ತಿರಬೇಕು. ಒಂದು ವೇಳೆ ಬೇರೆ ತಾಲ್ಲೂಕಿನ ಆಟಗಾರರನ್ನು ಆಡಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು.

ಸ್ಪರ್ಧೆಯನ್ನು ಏರ್ಪಡಿಸಲು ಕನಿಷ್ಠ 4 ತಂಡಗಳು ಇರಬೇಕು. ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಬೆಳಿಗ್ಗೆ 11-00 ಗಂಟೆಯೊಳಗಾಗಿ ನೋಂದಾವಣೆ ಮಾಡಿಕೊಂಡವರಿಗೆ ಮಾತ್ರ ಆಟವಾಡುವ ಅವಕಾಶ ಮತ್ತು ಮಧ್ಯಾಹ್ನದ ಲಘು ಉಪಹಾರದ ವ್ಯವಸ್ಥೆ ಇರುತ್ತದೆ.

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ವಿರೋಧಿಸಿದ ತಂಡದ ನಾಯಕನಿಗೆ ಒಂದು ಬಾರಿ ಜೂರಿ ಕಮಿಟಿಗೆ ಮನವಿ ಸಲ್ಲಿಸಲು ಅವಕಾಶವಿರುತ್ತದೆ. ಇದರ ಹೊರತು ಗಲಾಟೆ ನಡೆಸುವ ತೀರ್ಪನ್ನು ವಿರೋಧಿಸುವ ತಂಡಗಳನ್ನು ತೆಗೆದುಹಾಕಲಾಗುವುದು.

ಕ್ರೀಡಾಕೂಟದ ಸ್ಪರ್ಧೆಗಳನ್ನು ಪ್ರತ್ಯೇಕವಾಗಿ ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲಾಗುವುದು. ಸಮಯಕ್ಕೆ ಸರಿಯಾಗಿ ಹಾಜರಿರದ ತಂಡಗಳನ್ನು ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು.

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ನಡೆಸಲಿದ್ದು, ಸದರಿ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿಗದಿಪಡಿಸಿದ ದಿನಾಂಕದಂದು 10.00 ಘಂಟೆಯೊಳಗಾಗಿ ಕ್ರೀಡಾಕೂಟ ನಡೆಯುವ ಕ್ರೀಡಾಂಗಣದಲ್ಲಿ ಸಂಬಂಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಶಿವಮೊಗ್ಗ ಇವರು ಪ್ರಕಟಣೆ ತಿಳಿಸಿದ್ದಾರೆ.

BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora

Good News : ವಾಹನ ಸವಾರರಿಗೆ ಸಿಹಿ ಸುದ್ದಿ ; ‘ಕೇಂದ್ರ ಸರ್ಕಾರ’ದಿಂದ ಶೀಘ್ರ ‘ಪೆಟ್ರೋಲ್, ಡಿಸೇಲ್ ಬೆಲೆ’ ಇಳಿಕೆ ; ವರದಿ

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.