ಶಿವಮೊಗ್ಗ : ಸೆಪ್ಟೆಂಬರ್ 07 ರ ಗಣೇಶ ಚರ್ತುರ್ಥಿ ಹಬ್ಬದ ಆಚರಣೆ ಕಾರಣ ಶಿವಮೊಗ್ಗ ಮಹಾನಹರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಅನ್‌ಲೈನ್ ಕೌನ್ಸಲಿಂಗ್‌ಗೆ ಅರ್ಜಿ ಆಹ್ವಾನ
ಶಿವಮೊಗ್ಗದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಲಿಂಗ್ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 06ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರನ್ನು ದೂ.ಸಂ.: 08182-950365/ 950366 ಗಳನ್ನು ಸಂಪರ್ಕಿಸುವುದು.
BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora