ಉಡುಪಿ : ಈ ಬಾರಿಯ ರಾಮಕೃಷ್ಣಗೆ ಘೋಷಿಸಿದ್ದ ಉತ್ತಮ ಶಿಕ್ಷಕ ಪ್ರಶಸ್ತಿ ತಡೆದ ವಿಚಾರವಾಗಿ, ಇಂದು ರಾಷ್ಟ್ರೀಯ ಹೆದ್ದಾರಿ ತಡೆದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಿಕೃತಿಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನ ತಡೆದು ಧರಣಿ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 169 ಎ ಪಡೆದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಈ ವೇಳೆ ಉಡುಪಿಯ ಶಾಸಕ ಯಶ್ ಪಾಲ್ ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಕಾಪು ಶಾಸಕ ಸುರೇಶ್ ಶೆಟ್ಟಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.