ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧೀನಕ್ಕೆ ಒಳಪಡುವ ಎಲ್ಲಾ ಸಮುದಾಯದ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.15ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿವಿಧ ನಿಗಮಗಳ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಹೊಲಿಗೆ ಯಂತ್ರ ವಿತರಣೆ ಯೋಜನೆ (ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಕ್ಕೆ ಮಾತ್ರ), ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಜಿದಾರರು ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನ ಯಡಿ ಅರ್ಜಿ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಗರ, ಹೊಸನಗರ, ಸೊರಬ ವ್ಯಾಪ್ತಿಯಲ್ಲಿ ‘ಗಣೇಶೋತ್ಸವ’ದ ವೇಳೆ ಈ ಸುಕ್ಷತಾ ನಿಯಮ ಪಾಲನೆ ಕಡ್ಡಾಯ: ಮೆಸ್ಕಾಂ ಇಇ
ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಉದ್ಯೋಗಿನಿ ಯೋಜನೆ’ಯಡಿ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ