ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯು ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ಶಾಶ್ವತ / ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗನ್ನು ತೆರೆಯಲಾಗಿದೆ.
ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.
ಮುಂದುವರಿದು, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಪಾಲಿಕೆ ವೆಬ್ ಸೈಟ್ ಲಿಂಕ್ https://apps.bbmpgov.in/ganesh2024/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಸೆ.8, 15ರ ಭಾನುವಾರವೂ ತೆರೆದಿರಲಿದೆ ‘ಬೆಸ್ಕಾಂ’ ಉಪವಿಭಾಗದ ‘ಕ್ಯಾಶ್ ಕೌಂಟರ್’
ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿ.ಕೆ. ಶಿವಕುಮಾರ್