ಹತ್ರಾಸ್: ರಾಷ್ಟ್ರೀಯ ಹೆದ್ದಾರಿ 93ರಲ್ಲಿ ರಸ್ತೆ ಸಾರಿಗೆ ಬಸ್ ಮತ್ತು ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಮತ್ತು ಅಷ್ಟೇ ಸಂಖ್ಯೆಯ ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಹದಿಮೂರು ಜನರು ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಜಿಲ್ಲಾ ಅಧಿಕಾರಿಗಳಿಗೆ ಸ್ಥಳಕ್ಕೆ ತಲುಪಿ ಪರಿಹಾರ ಕ್ರಮಗಳ ಬಗ್ಗೆ ಕಾಳಜಿ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.
ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆಗ್ರಾ-ಅಲಿಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಅನ್ನು ಓವರ್ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಪುನ್ ಅಗರ್ವಾಲ್ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 10 ಕಿ.ಮೀ ದೂರದಲ್ಲಿರುವ ಕನ್ವರ್ಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಪ್ರಯಾಣಿಕರು ಹತ್ರಾಸ್ನಿಂದ ಆಗ್ರಾಕ್ಕೆ ತೆರಳುತ್ತಿದ್ದರು.
ಮೃತರನ್ನು ಇರ್ಷಾದ್ (25), ಮುನ್ನೆ ಖಾನ್ (55), ಮುಸ್ಕಾನ್ (16), ತಲ್ಲಿ (28), ತಬಸ್ಸುಮ್ (28), ನಜ್ಮಾ (25), ಭೋಲಾ (25), ಖುಷ್ಬು (25), ಜಮೀಲ್ (50), ಚೋಟೆ (25), ಅಯಾನ್ (2), ಸೂಫಿಯಾನ್ (1), ಅಲ್ಫಾಜ್ (6), ಶೋಯೆಬ್ (5) ಮತ್ತು ಇಶ್ರತ್ (5) ಎಂದು ಗುರುತಿಸಲಾಗಿದೆ.