ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎಂಬುದಾಗಿ ಸ್ಪೋಟಕ ಮಾಹಿತಿ ತನಿಖೆಯಲ್ಲಿ ಸತ್ಯ ಬಯಲಾಗಿದೆ.
ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ತನಿಖೆಯನ್ನು ನಡೆಸಲಾಗಿತ್ತು. ತನಿಖಾ ಅಧಿಕಾರಿಗಳ ತಂಡ ಪರಪ್ಪನ ಅಗ್ರಹಾರದ 15 ರಿಂದ 20 ಮಂದಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಂತ ನಟ ದರ್ಶನ್ ಗೆ ಜೈಲು ಸಿಬ್ಬಂದಿಳೇ ರಾಜಾತಿಥ್ಯ ನೀಡಿದ್ದಾರೆ ಎಂಬುದಾಗಿ ಹಲವು ಸಿಬ್ಬಂದಿಗಳು ಹೇಳಿಕೆ ನೀಡಿದ್ದಾರೆ.
ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಟೇಬಲ್, ಚೇರ್, ಮಗ್ ನಲ್ಲಿ ಟೀ ಕೊಟ್ಟು ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎನ್ನುವ ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಒಟ್ಟಾರೆಯಾಗಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಹೊರತು, ಬೇರೆಯಾರೂ ಅಲ್ಲ. ಇದರಲ್ಲಿ ಜೈಲು ಸಿಬ್ಬಂದಿಗಳ ಪಾತ್ರವೇ ಸಂಪೂರ್ಣವಾಗಿದೆ ಎಂಬುದಾಗಿ ತನಿಖೆಯಿಂದ ಸತ್ಯ ಬಹಿರಂಗವಾಗಿದೆ. ಈ ವರದಿಯನ್ನು ಆಧರಿಸಿ ರಾಜ್ಯ ಸರ್ಕಾರದ ತಪ್ಪೆಸಗಿದಂತ ಜೈಲು ಸಿಬ್ಬಂದಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
Shocking News: ಯೂಟ್ಯೂಬ್ ವೀಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: 15 ವರ್ಷದ ಬಾಲಕ ಸಾವು
ALERT : ಅತಿಯಾಗಿ ಮೊಬೈಲ್ ಬಳಸುವವರೇ ಎಚ್ಚರ : ಈ ಅಪಾಯಕಾರಿ ರೋಗ ನಿಮ್ಮನ್ನು ಕಾಡಬಹುದು!