Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಬೆಳಗಾಗುವಷ್ಟರಲ್ಲಿ ಮನಸ್ಸಿಗೆ ನೂರು ಯೋಚನೆ: ರಾತ್ರಿ ಹೊತ್ತೇ ಮನಸ್ಸು ಯಾಕೆ ಭಾರವೆನಿಸುತ್ತದೆ? ಇಲ್ಲಿದೆ ವೈಜ್ಞಾನಿಕ ಕಾರಣಗಳು!

19/04/2026 6:53 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

BIG NEWS : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಸಿ ಕಾಂಗ್ರೆಸ್ ನಿಂದ `ಭ್ರೂಣಹತ್ಯೆಯಂಥ ಪಾಪ ಕೃತ್ಯ : ಪ್ರಧಾನಿ ಮೋದಿ

19/04/2026 6:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೊಬೈಲ್ ನಲ್ಲೇ ನಿಮ್ಮ ಕೃಷಿ ಜಮೀನಿನ `ದಾರಿ’ ತಿಳಿಯಬಹುದು!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೊಬೈಲ್ ನಲ್ಲೇ ನಿಮ್ಮ ಕೃಷಿ ಜಮೀನಿನ `ದಾರಿ’ ತಿಳಿಯಬಹುದು!

By kannadanewsnow5708/09/2024 6:14 PM

ಬೆಂಗಳೂರು : ಕೃಷಿ ಜಮೀನಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೃಷಿ ಜಮೀನಿಗೆ ದಾರಿ ನೀಡುವ ಕುರಿತು ಮಹತ್ವದ ಸೂಚನೆ ನೀಡಿದೆ.

ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ನ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದು ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ.

ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು.

ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ. ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು ಹೆಚ್ಚು ವೃದ್ದಿಯಾದಂತೆ ವೃತ್ತಿಗಳಲ್ಲಿನ ತಾರತಮ್ಯ, ರಾಜ್ಯದ ಕ್ಲಿಷ್ಠಕರವಾದ ಆಡಳಿತ ನಿರ್ವಹಣೆಗೆ ವಿಶಿಷ್ಠ ಇಲಾಖೆಗಳು ಹೊರಹೊಮ್ಮಿದವು.

ಕಾಲ ಬದಲಾವಣೆಯಾದಂತೆ ಹಲವಾರು ಇಲಾಖೆಗಳು ರೂಪಿತಗೊಂಡು ಅಸ್ತಿತ್ವಕ್ಕೆ ಬಂದವು. ವಾಸ್ತವದ ಸಂಗತಿಯೆಂದರೆ ಪ್ರಾರಂಭದಲ್ಲಿ ಎಲ್ಲಾ ಇಲಾಖೆಗಳು ಕಂದಾಯ ಇಲಾಖೆಯಡಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ನಂತರ ಒಂದೊಂದಾಗಿ ಪ್ರತ್ಯೇಕಗೊಂಡವು. ಏನೇ ಆದರೂ ಇಂದಿಗೂ ಸಹ ರಾಜ್ಯದ ಹಾಗೂ ಸಮಾಜದ ಪ್ರಮುಖವಾದ ದೈನಂದಿನ ಕೆಲಸ ಕಾರ್ಯಗಳನ್ನು ಕಂದಾಯ ಇಲಾಖೆಯೇ ನಿರ್ವಹಿಸುತ್ತಿದೆ. ಈ ಕಾರಣಗಳಿಂದಾಗಿಯೇ ಸರ್ಕಾರದಲ್ಲಿ ಕಂದಾಯ ಇಲಾಖೆಯು “ಮಾತೃ ಇಲಾಖೆ”ಯೆಂದು ಕರೆಯಲ್ಪಡುತ್ತದೆ.

ಇಂತ ಕಂದಾಯ ಇಲಾಖೆಯು ಕರ್ನಾಟಕದ ಜನರಿಗೆ ಪ್ರತಿ ಹಳ್ಳಿಯ ಕಂದಾಯ ನಕ್ಷೆಯನ್ನು ಆನ್ ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನೀವು https://landrecords.karnataka.gov.in/service3/ ಗೆ ಭೇಟಿ ನೀಡಿ.

ಈ ಹಂತ ಅನುಸರಿಸಿ, ಕುಳಿತಲ್ಲೇ ಕಂದಾಯ ನಕ್ಷೆ ಡೌನ್ ಲೋಡ್ ಮಾಡಿ

https://landrecords.karnataka.gov.in/service3/ ಈ ಲಿಂಕ್ ಕ್ಲಿಕ್ ಮಾಡಿ, ಕಂದಾಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿದ ನಂತ್ರ ನಿಮಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಆಯ್ಕೆಯನ್ನು ತೋರಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ.
ಇದಾದ ಬಳಿಕ ನಿಮ್ಮ ಹೋಬಳಿಯ ಸಂಪೂರ್ಣ ಹಳ್ಳಿಗಳ ಕಂದಾಯ ನಕ್ಷೆಯನ್ನು ಪಿಡಿಎಫ್ ಪಾರ್ಮೆಟ್ ನಲ್ಲಿ ತೋರಿಸಲಿದೆ.
ನೀವು ನಿಮಗೆ ಬೇಕಾದ ಹಳ್ಳಿಯ ಕಂದಾಯ ನಕ್ಷೆಯನ್ನು ಪಕ್ಕದಲ್ಲಿ ಕಾಣುವಂತ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Good news for farmers in the state: You can know the 'way' of your farm on your mobile! ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM1 Min Read

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM2 Mins Read

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM2 Mins Read
Recent News

ರಾತ್ರಿ ಬೆಳಗಾಗುವಷ್ಟರಲ್ಲಿ ಮನಸ್ಸಿಗೆ ನೂರು ಯೋಚನೆ: ರಾತ್ರಿ ಹೊತ್ತೇ ಮನಸ್ಸು ಯಾಕೆ ಭಾರವೆನಿಸುತ್ತದೆ? ಇಲ್ಲಿದೆ ವೈಜ್ಞಾನಿಕ ಕಾರಣಗಳು!

19/04/2026 6:53 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

BIG NEWS : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಸಿ ಕಾಂಗ್ರೆಸ್ ನಿಂದ `ಭ್ರೂಣಹತ್ಯೆಯಂಥ ಪಾಪ ಕೃತ್ಯ : ಪ್ರಧಾನಿ ಮೋದಿ

19/04/2026 6:46 AM

​’ಅವರು ಸ್ವಲ್ಪ ಆಟವಾಡುತ್ತಿದ್ದಾರೆ ಅಷ್ಟೇ!’: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಉಲ್ಟಾ ಹೊಡೆದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

19/04/2026 6:46 AM
State News
KARNATAKA

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

By kannadanewsnow5719/04/2026 6:52 AM KARNATAKA 1 Min Read

ಬೆಂಗಳೂರು: ರಾಜ್ಯದ ಸಣ್ಣ ಗುತ್ತಿಗೆದಾರರ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ನಡೆಸಿದ ಸತತ…

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: `RTE’ ಉಚಿತ ಸೀಟಿಗೆ ಏ.21ರಿಂದ ಅರ್ಜಿ ಸಲ್ಲಿಕೆ ಆರಂಭ

19/04/2026 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.