ಚಿಕ್ಕಮಗಳೂರು : ಇತ್ತೀಚಿಗೆ ರಾಜ್ಯದ ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಲಾಗುತ್ತಿದ್ದು, ಕೇರಳದ ಹೇಮಾ ಸಮಿತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ 153ಕ್ಕೂ ಹೆಚ್ಚು ನಟ, ನಟಿಯರು ಮನವಿ ಮಾಡಿಕೊಂಡಿದ್ದಾರೆ. ಇದೀಗ, ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ಇಲ್ಲವೆಂದರೆ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದೆ.
ಹೌದು ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ನಟಿಯರು ಹಾಗೂ ಸಹ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಆರೋಪದ ಬೆನ್ನಲ್ಲಿಯೇ ಇದೀಗ ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ಮಹಿಳಾ ಪೇದೆಗಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಕೊಪ್ಪ ಮಹಿಳಾ ಪೇದೆಗಳು ತಮ್ಮ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳದ ಕುರಿತು ಇಂಚಿಂಚು ಮಾಹಿತಿ ಬಿಚ್ಚಿಟ್ಟಿದ್ದು, ಪಿಎಸ್ಐ ಬಸವರಾಜು ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಕುರಿತು ತಮಗೆ ಆಗುತ್ತಿರುವ ದೌರ್ಜನ್ಯ ಕುರಿತು ತನಿಖಾಧಿಕಾರಿಗಳಿಗೆ ಮಹಿಳಾ ಪೇದೆಗಳು. ಮಾಹಿತಿ ನೀಡಿದ್ದಾರೆ.ತನಿಖಾಧಿಕಾರಿಗಳಿಂದ ಚಿಕ್ಕಮಗಳೂರು ಎಸ್ ಪಿ ಬಸವರಾಜುಗೆ ಪ್ರಕರಣದ ಮಾಹಿತಿ ರವಾನೆ ಮಾಡಲಾಗಿದೆ.
ಇದೀಗ ಪ್ರಕರಣದ ತನಿಖೆಯು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿಯಿದೆ. ಆದರೆ, ಈ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿ ಹಾಕಲು ಪಿಎಸ್ಐ ಬಸವರಾಜು ತೀವ್ರ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪಗಳೂ ಕೂಡ ಕೇಳಿಬರುತ್ತಿವೆ.