ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕಿಡ್ನಾಪ್ ಸಂತ್ರಸ್ತೆ ರೇಪ್ ಕೇಸ್ ಸಂಬಂಧ ಕೋರ್ಟ್ ಗೆ ಎಸ್ಐಟಿ ಅಧಿಕಾರಿಗಳಿಂದ ಬರೋಬ್ಬರಿ 1632 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳಿಂದ ಪ್ರಜ್ವಲ್ ರೇವಣ್ಣ ವಿರುದ್ಧದ ಕಿಡ್ನಾಪ್ ಸಂತ್ರಸ್ತೆ ರೇಪ್ ಪ್ರಕರಣ ಸಂಬಂಧ 1632 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ 113 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ. ತನಿಖಾಧಿಕಾರಿ ಶೋಭಾ ಅವರು ಇಂದು ಕೋರ್ಟ್ ಗೆ ಪ್ರಜ್ವಲ್ ರೇವಣ್ಣ ವಿರುದ್ಧದ ಚಾರ್ಜ್ ಶೀಟ್ ಸಲ್ಲಿಸಿದರು.
ಬೆಂಗಳೂರು ಜನತೆ ಗಮನಕ್ಕೆ: ‘ಯಡಿಯೂರು ಕೆರೆ’ಯ ಕಲ್ಯಾಣಿಯಲ್ಲಿ ‘ಗಣೇಶ ಮೂರ್ತಿ ವಿಸರ್ಜನೆ’ಗೆ ನಿರ್ಬಂಧ