ಚಿತ್ರದುರ್ಗ : ನೀರು ಶುದ್ದೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ಈ ಒಂದು ಅವಘಡ ಸಂಭವಿಸಿದೆ.
ನೀರು ಶುದ್ದೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿ ಈ ಒಂದು ದುರಂತ ಸಂಭವಿಸಿದೆ ಅಸ್ವಸ್ಥಗೊಂಡವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಸ್ವಸ್ಥರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಅಸ್ವಸ್ಥರಿಗೆ ವೈದ್ಯರು ಆಕ್ಸಿಜನ್ ಪೂರೈಸಿ, ಚಿಕಿತ್ಸೆ ನೀಡುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.