ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ. ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ)ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ
ಉದ್ಯಮಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ) ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ಉಳಿದ ಮೊತ್ತವನ್ನು ಬ್ಯಾಂಕಿನಿಂದ ಸಾಲ ಪಡೆದುಕೊಳ್ಳಬೇಕು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ ರೂ. ಸಹಾಯಧನ 50,000 ರೂ. ಸಾಲ, 50,000 ರೂ. ಶೇ. 4 ರಷ್ಟು ಬಡ್ಡಿದರ
ಮೈಕ್ರೋ ಕ್ರೆಡಿಟ್ ಯೋಜನೆ
ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ. ಸಹಾಯಧನ 1.50 ಲಕ್ಷ ರೂ. ಸಾಲ 1 ಲಕ್ಷ ರೂ.
ಗಂಗಾ ಕಲ್ಯಾಣ ಯೋಜನೆ
1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ 4.75 ಲಕ್ಷ ರೂ. ಅದರಲ್ಲಿ 50 ಸಾವಿರ ರೂ. ಸಾಲವೂ ಸೇರಿರುತ್ತದೆ.
ಭೂ ಒಡೆತನ ಯೋಜನೆ
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ಘಟಕ 25 ಲಕ್ಷ ರೂ. ಸಹಾಯಧ ಶೇ. 50 ರಷ್ಟು ಸಹಾಯಧನ, ಸಾಲ.
2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.