ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯವರಿಗೆ ಗುಡ್ ನ್ಯೂಸ್ ಎನ್ನುವಂತೆ ಭೂ ಚೇತನ ಯೋಜನೆಯಡಿ 25 ಲಕ್ಷದ ವರೆಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನದ ಮೂಲಕ ಜಮೀನು ಖರೀದಿಸಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದಿದೆ.
ಪರಿಶಿಷ್ಟ ಜಾತಿಯವರಿಗಾಗಿ ಭೂ ಒಡೆತನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ ನೀಡಲಾಗುವುದು ಎಂದಿದೆ.
20 ರಿಂದ 25 ಲಕ್ಷದವರೆಗೆ ಘಟಕದ ವೆಚ್ಚವಾಗಿದೆ. ಇದಕ್ಕಾಗಿ ಶೇ.50ರಷ್ಟು ಸಹಾಯಧನ ನೀಡಲಾಗುತ್ತದೆ. ಶೇ.50ರಷ್ಟು ಸಹಾಯ ಧನಕ್ಕೆ ಶೇ.6ರ ಬಡ್ಡಿದರವಾಗಿದೆ ಎಂದಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್.10, 2024 ಕೊನೆ ದಿನವಾಗಿದೆ. ಆಸಕ್ತ ಪರಿಶಿಷ್ಟ ಜಾತಿಯವರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ ಎಂದಿದೆ.
ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.#ಭೂಒಡೆತನ_ಯೋಜನೆ@CMofKarnataka @siddaramaiah @DrHCMahadevappa pic.twitter.com/rFDfL1czSg
— DIPR Karnataka (@KarnatakaVarthe) September 10, 2024
BREAKING: ಮಣಿಪುರ ಭುಗಿಲೆದ್ದ ಹಿಂಸಾಚಾರ: 5 ದಿನಗಳ ಕಾಲ ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಜಾರಿ | Manipur violence
Good News: ಓಣಂ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ ರೈಲು | South Western Railway
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!