ಬೆಂಗಳೂರು: ಪರಿಶಿಷ್ಟ ಜಾತಿಯವರಿಗಾಗಿ ರಾಜ್ಯ ಸರ್ಕಾರದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು, ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸುವ ಗಂಗಾ ಕಲ್ಯಾಣ ಯೋಜನೆಗೆ ಎಸ್ಸಿ ಸಮುದಾಯದವರಿಗೆ ಅರ್ಜಿ ಆಹ್ವಾನಿಸಿರುವುದಾಗಿ ತಿಳಿಸಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಎಸ್ಸಿ ಸಮುದಾಯದವರಿಗೆ 4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50000 ಸಾಲವೂ ಸೇರಿರುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-10-2024 ಆಗಿರುತ್ತದೆ. ಅರ್ಜಿಗಳನ್ನು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸಲ್ಲಿಸಬಹುದು ಎಂದು ಹೇಳಿದೆ.
ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.#ಗಂಗಾಕಲ್ಯಾಣ_ಯೋಜನೆ@CMofKarnataka @siddaramaiah @DrHCMahadevappa pic.twitter.com/ysiWdaAZoT
— DIPR Karnataka (@KarnatakaVarthe) September 10, 2024
ರಾಜ್ಯದ ‘ಭೂರಹಿತ SC ಸಮುದಾಯ’ದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್: ಜಮೀನಿಗಾಗಿ ಅರ್ಜಿ ಆಹ್ವಾನ
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!