Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಲ್‌ಪಿಜಿ ಬಿಕ್ಕಟ್ಟು ಶಮನದತ್ತ: ಹಾರ್ಮುಜ್ ಜಲಸಂಧಿ ದಾಟಲು ಸಜ್ಜಾದ ಮತ್ತೆರಡು ಭಾರತೀಯ ಅನಿಲ ಟ್ಯಾಂಕರ್!

23/03/2026 3:34 PM

BIG NEWS ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್!

23/03/2026 3:33 PM

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಕೇಂದ್ರ ಸಚಿವ HD ಕುಮಾರಸ್ವಾಮಿ
KARNATAKA

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಕೇಂದ್ರ ಸಚಿವ HD ಕುಮಾರಸ್ವಾಮಿ

By kannadanewsnow0910/09/2024 5:53 PM

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು; ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಎಂ.ಬಿ.ಪಾಟೀಲ್ ಅವರಿಗೆ ಹೇಳಿದರು.

ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು; ಎಂ.ಬಿ.ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ Hmt ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂಬಿ ಪಾಟೀಲ್ ಅವರ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕೇಂದ್ರ ಕೈಗಾರಿಕೆ ಸಚಿವರು ಹೇಳಿದರು.

ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

ಬೆಂಗಳೂರಲ್ಲಿ ಹಳದಿ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ಸಂಚಾರ ಆರಂಭ: ಡಿಸೆಂಬರ್ ನಲ್ಲಿ ವಾಣಿಜ್ಯ ಸೇವೆ ಶುರು

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!

Share. Facebook Twitter LinkedIn WhatsApp Email

Related Posts

BIG NEWS ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್!

23/03/2026 3:33 PM1 Min Read

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM1 Min Read

ಯಾದಗಿರಿಯಲ್ಲಿ ಪತ್ನಿ ಜೊತೆಗಿನ ಅನೈತಿಕ ಸಂಭಂದ ಪ್ರಶ್ನಿಸಿದಕ್ಕೆ, ಪ್ರಿಯಕರನಿಂದಲೇ ಪತಿಯ ಹತ್ಯೆ!

23/03/2026 3:22 PM1 Min Read
Recent News

ಎಲ್‌ಪಿಜಿ ಬಿಕ್ಕಟ್ಟು ಶಮನದತ್ತ: ಹಾರ್ಮುಜ್ ಜಲಸಂಧಿ ದಾಟಲು ಸಜ್ಜಾದ ಮತ್ತೆರಡು ಭಾರತೀಯ ಅನಿಲ ಟ್ಯಾಂಕರ್!

23/03/2026 3:34 PM

BIG NEWS ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್!

23/03/2026 3:33 PM

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM

ಯಾದಗಿರಿಯಲ್ಲಿ ಪತ್ನಿ ಜೊತೆಗಿನ ಅನೈತಿಕ ಸಂಭಂದ ಪ್ರಶ್ನಿಸಿದಕ್ಕೆ, ಪ್ರಿಯಕರನಿಂದಲೇ ಪತಿಯ ಹತ್ಯೆ!

23/03/2026 3:22 PM
State News
KARNATAKA

BIG NEWS ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್!

By kannadanewsnow0523/03/2026 3:33 PM KARNATAKA 1 Min Read

ಬೆಂಗಳೂರು : ಇವರಿಗೆ ನಿರುದ್ಯೋಗಿ ಯುವಕರೇ ಟಾರ್ಗೆಟ್ ಆಗಿದ್ದು, ಅವರಿಗೆ ಕೋರ್ಟ್ ನಲ್ಲಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಒಬ್ಬರಿಂದ 20ರಿಂದ…

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM

ಯಾದಗಿರಿಯಲ್ಲಿ ಪತ್ನಿ ಜೊತೆಗಿನ ಅನೈತಿಕ ಸಂಭಂದ ಪ್ರಶ್ನಿಸಿದಕ್ಕೆ, ಪ್ರಿಯಕರನಿಂದಲೇ ಪತಿಯ ಹತ್ಯೆ!

23/03/2026 3:22 PM

BIG NEWS: ‘ಕೃಷಿ ಅಧಿಕಾರಿ’ಗಳ ನೇಮಕಾತಿ ಈಗ ಮತ್ತಷ್ಟು ಪಾರದರ್ಶಕ: ಎಓ, ಎಎಓ ಹುದ್ದೆಗಳ ಭರ್ತಿ ಹೊಣೆ ‘ಕೆಇಎ’ಗೆ ಹಸ್ತಾಂತರ

23/03/2026 3:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.