ಬೆಂಗಳೂರು: ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ಎನ್ನುವಂತೆ, ರಾಜ್ಯ ಸರ್ಕಾರದಿಂದ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಿ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪ್ರಾಥಮಿಕ)ಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಸದರಿ ಆದೇಶದ ಕಂಡಿಕೆ-8ರಲ್ಲಿ “ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ” ಎಂದು ಆದೇಶಿಸಲಾಗಿರುತ್ತದೆ ಎಂದಿದ್ದಾರೆ.
ಸರ್ಕಾರದ ಆದೇಶದಲ್ಲಿ ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ವಿಸ್ತ್ರತವಾದ ಆದೇಶವನ್ನು ಹೊರಡಿಸಿದ್ದು, ಸದರಿ ಆದೇಶದ ಕಂಡಿಕೆ 11.1ರಲ್ಲಿ “ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ” ಎಂದು ಆದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದಿಂದ ಸಹಾಯಾನುದಾನ ಪಡೆಯುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿನ ಶಾಲಾ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಇತರೆ ಅನುದಾನಿತ ಶಿಕ್ಷಣ ಸಂಸ್ಥೆಗಳ ರಾಜ್ಯ ವೇತನ ಶ್ರೇಣಿಯಲ್ಲಿರುವ ನೌಕರರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ:ಆಇ 21 ಎಸ್‌ಆರ್‌ಪಿ 2024, ದಿನಾಂಕ:17.08.2024ರಲ್ಲಿ ಹೊರಡಿಸಿರುವ ಕರ್ನಾಟಕ ನಾಗರೀಕ ಸೇವಾ(ಪರಿಷ್ಕೃತ ವೇತನ) ನಿಯಮಗಳು-2024 ಹಾಗೂ ಸಂಬಂಧಿತ ಸರ್ಕಾರದ ಆದೇಶಗಳನ್ನು ವಿಸ್ತರಿಸಲು ಸರ್ಕಾರದ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ರಾಜ್ಯ ಸರ್ಕಾರದಿಂದ ‘ಉದ್ಯೋಗಾಕಾಕ್ಷಿ’ಗಳಿಗೆ ಸಿಹಿಸುದ್ದಿ: ಈ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!