ನವದೆಹಲಿ : ರಾಜ್ಯದಲ್ಲಿ ಸಿಎಂ ಕುರ್ಚಿಯ ಕುರಿತು ಈಗಾಗಲೇ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ನಿನ್ನೆ MLC ಗಳು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನದ ಕುರಿತು ಸಚಿವರ ಹೇಳಿಕೆಗೆ ಬ್ರೇಕ್ ಹಾಕಿ ಎಂದು ಪತ್ರ ಬರೆದಿದ್ದಾರೆ.ಇದರ ಮಧ್ಯ ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
ಹೌದು 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ಅವರು ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.
ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ರಾಜ್ಯದವರೇ ಆದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕಂಡ ಪಾಟೀಲ ಅವರು, ಮೇಲಿನ ಸಂಗತಿಗಳ ಜತೆಗೆ ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ವಿಚಾರ ವಿನಿಮಯ ನಡೆಸಿದರು.
ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಜರೂರು, ರಾಜ್ಯದಲ್ಲಿರುವ ಬಿಎಚ್‌ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಚರ್ಚಿಸಿದರು.
ನವದೆಹಲಿಯಲ್ಲಿ ಇಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ @hd_kumaraswamy ಅವರನ್ನು ಭೇಟಿಮಾಡಿ ರಾಜ್ಯದ ಕೈಗಾರಿಕಾ ಯೋಜನೆಗಳ ಕುರಿತು ವಿವರವಾಗಿ ಚರ್ಚಿಸಿದೆ. ಆಧುನಿಕ ಜಗತ್ತಿನಲ್ಲಿ ಪ್ರಮುಖ ಉದ್ಯಮವಾಗಿ ಬೆಳೆಯುತ್ತಿರುವ ಸೆಮಿಕಂಡಕ್ಟರ್ ವಲಯ, ಹೈಟೆಕ್-ಉತ್ಪಾದನಾ ಘಟಕಗಳು, ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ವಿಷಯಗಳ… pic.twitter.com/BBGaYR2yhk
— M B Patil (@MBPatil) September 10, 2024