ರಾಯಚೂರು : ರಾಜ್ಯದಲ್ಲಿ ಘೋರ ಘಟನೆಯೊಂದು ಬೆಳಕಿಗೆ ಬಂದಿದ್ದು, ಶಾಲೆಗೆ ಹೋಗಿದ್ದ ವಿದ್ಯಾರ್ಥಿಯೊಬ್ಬ ಲೋ ಬಿಪಿಯಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರಿನ ಸಿರವಾರದ ಶಾಲೆಯೊಂದರಲ್ಲಿ ತರಗತಿಯಲ್ಲಿ ಕುಳಿತಿದ್ದ ವೇಳೆ ಲೋ ಬಿಪಿಯಿಂದ ತಲೆ ಸುತ್ತು ಬಂದು 8 ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದಿದ್ದಾನೆ. ಕೂಡಲೇ ವಿದ್ಯಾರ್ಥಿಯನ್ನು ಶಿಕ್ಷಕರು ಅಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ಮಾರ್ಗ ಮಧ್ಯದಲ್ಲಿಯೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಮೃತ ವಿದ್ಯಾರ್ಥಿಯನ್ನು 8 ನೇ ತರಗತಿಯ ತರುಣ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ತರಗತಿಯಲ್ಲಿ ಕುಳಿತಿರುವಾಗ ಲೋ ಬಿಪಿಯಿಂದ ಕುಸಿದು ಬಿದ್ದಿದ್ದ. ಆದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ.