ಬೆಂಗಳೂರು: ಪ್ರೀತಿಸಿದಂತ ಯುವತಿ ಕೈ ಕೊಟ್ಟ ಬಳಿಕ, ಆಕೆಯ ಖಾಸಗಿ ಪೋಟೋಗಳನ್ನು ಇಟ್ಟುಕೊಂಡು ಕೆಲ ತಿಂಗಳಿಂದ ಬ್ಲಾಕ್ ಮೇಲ್ ಮಾಡುತ್ತಿದ್ದಂತ ಕಿರುತೆರೆ ನಟ ವರುಣ್ ಆರಾಧ್ಯ ಎಂಬುವರ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರಿನ ಪಶ್ಚಿಮ ವಿಭಾಗದ ಸೆನ್ ಠಾಣೆಗೆ ತೆರಳಿರುವಂತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ಯುವತಿಯೊಬ್ಬಳು ತನಗೆ ಕಿರುತೆರೆ ನಟ ವರುಣ್ ಆರಾಧ್ಯ ಇನ್ಸ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದನು. ಪರಿಚಯ ಸ್ನೇಹಕ್ಕೆ ತಿರುಗಿ, ಆ ಬಳಿಕ ತಾವಿಬ್ಬರೂ ಪ್ರೀತಿಸುತ್ತಿದ್ದವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೆಲ ತಿಂಗಳ ಹಿಂದಿನಿಂದ ತಾನು, ಅರುಣ್ ಆರಾಧ್ಯ ದೂರವಾಗಿದ್ದೆವು. ಈ ಬಳಿಕ ವರುಣ್ ಆರಾಧ್ಯ ತನ್ನ ಖಾಸಗಿ ಕ್ಷಣದ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ಮನವಿ ಮಾಡಿದ್ದಾರೆ.
ಯುವತಿಯ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಪಶ್ಟಿಮ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮಹಿಳೆಯರ ಗಮನಕ್ಕೆ: ಪ್ರೋತ್ಸಾಹಧನ, ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!