ಬೆಂಗಳೂರು: ನನಗೆ ಜೈಲೂಟ ಬೇಡ. ಮನೆ ಊಟ ಬೇಕು ಎಂಬುದಾಗಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿದ್ದಂತ ಅರ್ಜಿಯನ್ನು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ವಾಪಾಸ್ ಪಡೆದಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆಗುತ್ತಿದ್ದಂತೆ, ಕೆಲ ಜೈಲು ಅಧಿಕಾರಿಗಳ ತಲೆದಂಡವಾಗಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಈ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಕಾರಣ, ನಟ ದರ್ಶನ್ ಪರ ವಕೀಲರು ಮನೆ ಊಟಕ್ಕಾಗಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿದ್ದಂತ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ. ಕಾರಣ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವುದರಿಂದ ಆಗಿದೆ.
ಅಂದಹಾಗೇ ಜೈಲು ಊಟ ಬೇಡ, ಮನೆ ಊಟ ಬೇಕು ಎಂಬುದಾಗಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಆದರೇ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಮಾಡಿರುವ ಕಾರಣ, ಅರ್ಜಿಯನ್ನು ವಾಪಾಸ್ ಪಡೆಯಲಾಗಿದೆ.
ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!