ಬೆಂಗಳೂರು : ಜಿಎಸ್‌ಟಿ ಮತ್ತು ಇಡಿ ಅಧಿಕಾರಿಗಳು ಬೆಂಗಳೂರಿನ ಉದ್ಯಮಿ ಒಬ್ಬರಿಗೆ ಕೇಸ್ ಮುಚ್ಚಿಹಾಕುವುದಾಗಿ 1.5 ಕೋಟಿ ಪಡೆದು ವಂಚನೆ ಎಸಗಿದ್ದ ನಾಲ್ವರು GST ಅಧಿಕಾರಿಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು 13 ದಿನಗಳ ಕಾಲ ಸಿಸಿಬಿ ಕಸ್ಟರ್ಡ್ಗೆ ನೀಡಿ ಬೆಂಗಳೂರಿನ ಒಂದನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ.
ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳು ಎಂದು ತಿಳಿದುಬಂದಿದ್ದು, ಇಂದು ನ್ಯಾಯಾಲಯದಲ್ಲಿ ಸಿಸಿಬಿ ಅಧಿಕಾರಿಗಳು ಎಲ್ಲಾ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಹಾಜರುಪಡಿಸಿದ್ದರು.
ಬಂಧಿತ ನಾಲ್ವರು ಅಧಿಕಾರಿಗಳಿಗೆ 13 ದಿನ ಸಿಸಿಬಿ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ ಒಂದನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಜಿ ಎಸ್ ಟಿ ಅಧಿಕಾರಿಗಳನ್ನು ಸಿಸಿಬಿ ಅಧಿಕಾರಿಗಳು ಮುಂದೆ ಹಾಜರುಪಡಿಸಿದ್ದರು. ಇದೀಗ ಎಲ್ಲಾ ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು 13 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣ ಹಿನ್ನೆಲೆ?
ಕೇಸ್ ಮುಚ್ಚಿಹಾಕುವುದಾಗಿ ಜಿಎಸ್‌ಟಿ ಅಧಿಕಾರಿಗಳು ಹಣ ಪಡೆದು ಬಳಿಕ ಪರಾರಿಯಾಗಿದ್ದರು. ಈ ಬಗ್ಗೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಓರ್ವ ಉದ್ಯಮಿ ದೂರು ನೀಡಿದ್ದರು. ದೂರು ಆಧರಿಸಿ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ ದಾಳಿ ರೂಪದಲ್ಲಿ ಕೃತ್ಯವೆಸಗಿದ್ದರು.
ಬೆಂಗಳೂರು ನಗರ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ಪಶ್ಚಿಮ ವಿಭಾಗ ಪೊಲೀಸರಿಂದ ಕಾರ್ಯಾಚರಣೆ ಮಾಡಿ ಬಂಧಿಸಲಾಗಿದೆ. ಪ್ರಕರಣವನ್ನು ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದರು. ಇದೀಗ ಆರೋಪಗಳನ್ನು 13 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಅದೇಶಿಸಿದೆ.