ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಈವರೆಗೆ 4 ಸಾವಿರ ಗುಂಡಿಗಳ್ನು ದುರಸ್ತಿ ಮಾಡಿರುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಏಪ್ರಿಲ್ 1 ರಿಂದ 4 ಸಾವಿರ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ಎರಡು ಸಾವಿರ ಗುಂಡಿ ಮುಚ್ಚಬೇಕಿದೆ. ಆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ.
ʼರಸ್ತೆ ಗುಂಡಿನ ಗಮನʼ ಆ್ಯಪ್‌ನಲ್ಲಿ ಸುಮಾರು 1,600 ದೂರುಗಳು ಬಂದಿವೆ. ಅದರಲ್ಲಿ ಒಂದು ಸಾವಿರ ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದೆ. ತ್ವರಿತಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಏಪ್ರಿಲ್ 1 ರಿಂದ 4 ಸಾವಿರ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ಎರಡು ಸಾವಿರ ಗುಂಡಿ ಮುಚ್ಚಬೇಕಿದೆ. ʼರಸ್ತೆ ಗುಂಡಿನ ಗಮನʼ ಆ್ಯಪ್‌ನಲ್ಲಿ ಸುಮಾರು 1,600 ದೂರುಗಳು ಬಂದಿವೆ. ಅದರಲ್ಲಿ ಒಂದು ಸಾವಿರ ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದೆ. ತ್ವರಿತಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು… pic.twitter.com/rc125AEGd3
— DIPR Karnataka (@KarnatakaVarthe) September 11, 2024
ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು.
ನಗರದ ಆರ್.ಆರ್ ನಗರ ವಲಯ ಪಂತರಪಾಳ್ಯ – ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಗುಂಡಿ ಪರಿಶೀಲನೆಯ ಬಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. ಇದರಿಂದ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬಹುದಾಗಿದೆ ಎಂದು ಹೇಳಿದರು.
ಜೆಟ್ ಪ್ಯಾಚರ್ ಯಂತ್ರದ ಮೂಲಕ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚಬಹುದಾಗಿದೆ. ಈ ಯಂತ್ರದಲ್ಲಿ ಒಂದು ಬಾರಿಗೆ 150 ರಿಂದ 180 ಚ.ಮೀ ಅಗಲದ ರಸ್ತೆ ಗುಂಡಿಗಳನ್ನು ಮುಚ್ಚಬಹುದಾಗಿದ್ದು, ರಸ್ತೆ ಗುಂಡಿ ಮುಚ್ಚಿದ ಕೂಡಲೆ ವಾಹನಗಳು ಅದರ ಮೇಲೆ ಸರಾಗವಾಗಿ ಸಂಚಾರ ಮಾಡಬಹುದಾಗಿರುತ್ತದೆ ಎಂದು ತಿಳಿಸಿದರು.
ಆರ್.ಆರ್ ನಗರ ವಲಯದಲ್ಲಿ ಸಂಪೂರ್ಣ ರಸ್ತೆ ಹಾಳಾಗಿರುವುದನ್ನು ಹೊರತುಪಡಿಸಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಗಲು-ರಾತ್ರಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಕಾಲಮಿತಿಯೊಳಗಾಗಿ ಗುಂಡಿಗಳನ್ನು ಮುಚ್ಚಲಾಗುವುದೆಂದು ತಿಳಿಸಿದರು.
ವಲಯ ವ್ಯಾಪ್ತಿಯಲ್ಲಿ ಬರುವ 20 ವಾರ್ಡ್ಗಳಲ್ಲಿ ಅಭಿಯಂತರರು 20ನೇ ಮೇ 2024 ರಿಂದ ಇದುವರೆಗೆ 2443 ರಸ್ತೆಗುಂಡಿಗಳನ್ನು ಗುರುತಿಸಿದ್ದು, ಅದರಲ್ಲಿ 2408 ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದ್ದು, 35 ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
ಇನ್ನು “ರಸ್ತೆ ಗುಂಡಿ ಗಮನ ತಂತ್ರಾಂಶ” ದಲ್ಲಿ ಸಾರ್ವಜನಿಕರಿಂದ 461 ದೂರುಗಳು ದಾಖಲಾಗಿದ್ದು, ಅದರಲ್ಲಿ 86 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, 302 ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಶೀಘ್ರ ಮುಗಿಸಲಾಗುವುದೆಂದು ತಿಳಿಸಿದರು.
ರಾಜರಾಜೇಶ್ವರಿ ನಗರ ವಲಯ ಪ್ರಮುಖ ಅಂಶಗಳು:
* ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 02
* ವಾರ್ಡ್ ಗಳ ಸಂಖ್ಯೆ: 20
* ರಾಜರಾಜೇಶ್ವರಿ ನಗರ ವಲಯದ ಒಟ್ಟು ವಿಸ್ತೀರ್ಣ: 112.01 ಚ.ಕಿ.ಮೀಟರ್
* ವಾರ್ಡ್ ರಸ್ತೆಗಳ ಸಂಖ್ಯೆ: 11367
* ವಾರ್ಡ್ ರಸ್ತೆಗಳ ಉದ್ದ: 1829.44 ಕಿ.ಮೀ
* ಪ್ರಮುಖ ರಸ್ತೆಗಳ ಸಂಖ್ಯೆ: 44
* ಪ್ರಮುಖ ರಸ್ತೆಗಳ ಉದ್ದ: 216.45
* ವಲಯ ವ್ಯಾಪ್ತಿಯ ರಸ್ತೆಗಳ ಒಟ್ಟು ಉದ್ದ: 2045.89 ಕಿ.ಮೀ
‘KSRTC ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment
ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ