ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೆಎಸ್ ಆರ್ ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯಮಟ್ಟದ ಧರಣಿ ಸತ್ಯಾಗ್ರಹ ನಡೆಸಲಿದೆ.
ವೇತನ ಹೆಚ್ಚಳ ಹಿಂಬಾಕಿ ಪಾವತಿ, ನಿವೃತ್ತಿ ನೌಕರರಿಗೆ ಬಾಕಿ ಇರುವ ಹಣ ಪಾವತಿಗೆ ಸಂಬಂಧಿಸಿದಂತೆ 2024 ರ ಜೂ.27 ರಂದು ನಿಗಮಗಳ ಆದೇಶದಂತೆ ಹಣ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಇಂದು ಕೆಎಸ್ ಆರ್ ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ.
ಇಂದಿನ ಪ್ರತಿಭಟನೆಯಲ್ಲಿ 1,000 ಕ್ಕೂ ಹೆಚ್ಚಿನ ನೌಕರರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಪ್ರತಿಭಟನೆ ನಂತರ ಸರ್ಕಾರ, ಸಾರಿಗೆ ಇಲಾಖೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು ಎಂದು ಕೆಎಸ್ ಆರ್ ಟಿಸಿ ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.