ಬೆಂಗಳೂರು : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ.
ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ.