ರಾಮನಗರ: ರಾಜ್ಯದ ಜನರಿಗೆ ಮತ್ತೆ ಶಾಕ್ ಎನ್ನುವಂತೆ ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಬಿಗ್ ಶಾಕ್ ನೀಡಿದ್ದಾರೆ.
ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರೈತರಿಗೆ ಅನುಕೂಲವಾಗಲೆಂದು ನಂದಿನ ಹಾಲಿನ ದರವನ್ನು ಹೆಚ್ಚಳ ಮಾಡಲಾಗುತ್ತದೆ. ಇದು ನಿಮಗಾಗಿ ಸರ್ಕಾರ ಮಾಡುತ್ತಿರುವಂತ ಏರಿಕೆಯಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಜೊತೆಗೆ ಸಭೆ ನಡೆಸಲಾಗುತ್ತದೆ. ಆ ಸಭೆಯ ಬಳಿಕ ಹಾಲಿನ ದರ ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ನೀವೆಲ್ಲ ನಮ್ಮ ಪರವಾಗಿದ್ದರೇ ಹಾಲಿನ ದರ ಹೆಚ್ಚಳ ಮಾಡಲಾಗುತ್ತದೆ ಎಂದರು.
ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ನಾಗಮಂಗಲದಲ್ಲಿ ಘಟನೆ: ಇದು ಕಾಂಗ್ರೆಸ್ ಪ್ರಾಯೋಜಿತ ಪಿತೂರಿ – HDK