Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

3 ದಿನಗಳ ಹರ್ ಘರ್ ತಿರಂಗಾ ಚಲನಚಿತ್ರೋತ್ಸವ ದೇಶಾದ್ಯಂತ ಆರಂಭ: ಭಾರತದ ಸ್ವಾತಂತ್ರ್ಯ, ಏಕತೆಯ ಕಥೆಗಳ ಪ್ರದರ್ಶನ

11/08/2025 10:10 PM

ಚಿಕ್ಕದಿದ್ರೂ ದೊಡ್ಡ ಕೆಲಸ.. ಊಟದ ನಂತ್ರ ಹೀಗೆ ಮಾಡಿದ್ರೆ, 48 ಗಂಟೆಗಳಲ್ಲಿ ಊಹಿಸದ ಬದಲಾವಣೆ

11/08/2025 10:05 PM

ರಾಹುಲ್ ಗಾಂಧಿ ಸುಳ್ಳಿಗೆ ಕನ್ನಡಿ ಹಿಡಿದ ದಲಿತ ಮಂತ್ರಿಗೆ ರಾಜೀನಾಮೆ ‘ಗ್ಯಾರೆಂಟಿ ಭಾಗ್ಯ’: ಆರ್.ಅಶೋಕ್

11/08/2025 10:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಸೀದಿ ಮುಂದೆ ಗಣೇಶೋತ್ಸವ ಮೆರವಣಿಗೆ ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಆರ್ ಅಶೋಕ್ ಪ್ರಶ್ನೆ
KARNATAKA

ಮಸೀದಿ ಮುಂದೆ ಗಣೇಶೋತ್ಸವ ಮೆರವಣಿಗೆ ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಆರ್ ಅಶೋಕ್ ಪ್ರಶ್ನೆ

By kannadanewsnow0913/09/2024 3:22 PM

ಬೆಂಗಳೂರು : ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸರಣಿ ಟ್ವೀಟ್‌ ಮಾಡಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುವ ಮಾತಾಡುತ್ತಿದೆ. ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಪ್ರಶ್ನೆಗಳಿಗೆ ಉತ್ತರಿಸಿ

ನೆಲಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ ಎಂದಿರುವ ಆರ್‌.ಅಶೋಕ, ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

1.) ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಿಲ್ಲವೇಕೆ?
2.) ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ನಿರ್ಲಕ್ಷ್ಯ ಮಾಡಲಾಯಿತೇ?
3.)ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಭದ್ರತೆ ಯಾಕೆ ನೀಡಲಿಲ್ಲ?
4) ಪಟ್ಟಣದಲ್ಲಿದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?
5) ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿದ್ದ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?
6) ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ ನಲ್ಲಿ ಎ1 ಮಾಡಿರುವುದೇಕೆ?
7) ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?
8) ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?
9) ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?
10) ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, 25 ಕೋಟಿ ರೂ. ಮೊತ್ತದ ಆಸ್ತಿ ನಷ್ಟವಾದರೂ, ಗೃಹ ಸಚಿವರಿಗೆ ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣವೇನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?
11) ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇನ್ನೂ ಭೇಟಿ ನೀಡಿಲ್ಲವೇಕೆ?

ತಪ್ಪು ಎಫ್‌ಐಆರ್‌, ಉಗ್ರ ಹೋರಾಟದ ಎಚ್ಚರಿಕೆ

ಈ ರೀತಿ ಹಿಂದೂಗಳ ವಿರುದ್ಧವೇ ತಪ್ಪು ಎಫ್ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈ ಬಿಡದಿದ್ದರೆ ನಾಗಮಂಗಲದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆರ್‌.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟು, ಸರಕು-ಸರಂಜಾಮು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಪೂರ್ವ ನಿಯೋಜಿತ ಕೋಮು ಗಲಭೆಯನ್ನು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ? ಎಂದು ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ ಎಂದು ಅವರು ಹೇಳಿದ್ದಾರೆ.

ಮತ್ತೆ ಭಾರತಕ್ಕೆ ‘ಫೋರ್ಡ್’ ಎಂಟ್ರಿ: ಹೊಸದಾಗಿ ಬರೋಬ್ಬರಿ ‘3000 ಉದ್ಯೋಗ’ ಸೃಷ್ಠಿ | American Automaker Ford

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

3 ದಿನಗಳ ಹರ್ ಘರ್ ತಿರಂಗಾ ಚಲನಚಿತ್ರೋತ್ಸವ ದೇಶಾದ್ಯಂತ ಆರಂಭ: ಭಾರತದ ಸ್ವಾತಂತ್ರ್ಯ, ಏಕತೆಯ ಕಥೆಗಳ ಪ್ರದರ್ಶನ

11/08/2025 10:10 PM5 Mins Read

ರಾಹುಲ್ ಗಾಂಧಿ ಸುಳ್ಳಿಗೆ ಕನ್ನಡಿ ಹಿಡಿದ ದಲಿತ ಮಂತ್ರಿಗೆ ರಾಜೀನಾಮೆ ‘ಗ್ಯಾರೆಂಟಿ ಭಾಗ್ಯ’: ಆರ್.ಅಶೋಕ್

11/08/2025 10:05 PM1 Min Read

ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

11/08/2025 10:01 PM1 Min Read
Recent News

3 ದಿನಗಳ ಹರ್ ಘರ್ ತಿರಂಗಾ ಚಲನಚಿತ್ರೋತ್ಸವ ದೇಶಾದ್ಯಂತ ಆರಂಭ: ಭಾರತದ ಸ್ವಾತಂತ್ರ್ಯ, ಏಕತೆಯ ಕಥೆಗಳ ಪ್ರದರ್ಶನ

11/08/2025 10:10 PM

ಚಿಕ್ಕದಿದ್ರೂ ದೊಡ್ಡ ಕೆಲಸ.. ಊಟದ ನಂತ್ರ ಹೀಗೆ ಮಾಡಿದ್ರೆ, 48 ಗಂಟೆಗಳಲ್ಲಿ ಊಹಿಸದ ಬದಲಾವಣೆ

11/08/2025 10:05 PM

ರಾಹುಲ್ ಗಾಂಧಿ ಸುಳ್ಳಿಗೆ ಕನ್ನಡಿ ಹಿಡಿದ ದಲಿತ ಮಂತ್ರಿಗೆ ರಾಜೀನಾಮೆ ‘ಗ್ಯಾರೆಂಟಿ ಭಾಗ್ಯ’: ಆರ್.ಅಶೋಕ್

11/08/2025 10:05 PM

ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

11/08/2025 10:01 PM
State News
KARNATAKA

3 ದಿನಗಳ ಹರ್ ಘರ್ ತಿರಂಗಾ ಚಲನಚಿತ್ರೋತ್ಸವ ದೇಶಾದ್ಯಂತ ಆರಂಭ: ಭಾರತದ ಸ್ವಾತಂತ್ರ್ಯ, ಏಕತೆಯ ಕಥೆಗಳ ಪ್ರದರ್ಶನ

By kannadanewsnow0911/08/2025 10:10 PM KARNATAKA 5 Mins Read

ನವದೆಹಲಿ: ಹರ್ ಘರ್ ತಿರಂಗಾ – ದೇಶಭಕ್ತಿಯ ಚಲನಚಿತ್ರೋತ್ಸವವು ಇಂದು ಉತ್ಸಾಹಭರಿತ ಪ್ರತಿಕ್ರಿಯೆಯೊಂದಿಗೆ ಪ್ರಾರಂಭವಾಯಿತು, ಇದು ಭಾರತದ ಸ್ವಾತಂತ್ರ್ಯಕ್ಕೆ ಮೂರು ದಿನಗಳ…

ರಾಹುಲ್ ಗಾಂಧಿ ಸುಳ್ಳಿಗೆ ಕನ್ನಡಿ ಹಿಡಿದ ದಲಿತ ಮಂತ್ರಿಗೆ ರಾಜೀನಾಮೆ ‘ಗ್ಯಾರೆಂಟಿ ಭಾಗ್ಯ’: ಆರ್.ಅಶೋಕ್

11/08/2025 10:05 PM

ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

11/08/2025 10:01 PM

ಸಾಗರದಲ್ಲಿ ಧರ್ಮಸ್ಥಳ ಕ್ಷೇತ್ರದ ಗೌರವ, ಘನತೆ ಕುಗ್ಗಿಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ನಾಗರೀಕ ಸಮಿತಿ ಒತ್ತಾಯ

11/08/2025 8:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.