ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಿ ಎನ್ನುವಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ನಾಗಮಂಗಲ ಗಲಭೆಯ ಬೆನ್ನಲ್ಲೇ, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಎತ್ತಂಗಡಿ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಇದಲ್ಲದೆ ಕೆ.ವಿ.ಶರತ್ ಚಂದ್ರ, ಐಪಿಎಸ್ (ಕೆಎನ್ -1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ.
ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಇದಲ್ಲದೆ, ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್-1998) ಅವರು ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಆಯುಕ್ತರ ಹುದ್ದೆಯ ಸಮವರ್ತಿ ಉಸ್ತುವಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿರ್ವಹಿಸಲಿದ್ದಾರೆ.