ಬೆಂಗಳೂರು; ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಹೊರವಲಯದ ಐದು ಕಡೆಗಳಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಸಭೆ ನಡೆಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಟೌನ್ ಶಿಪ್ ನಿರ್ಮಾಣ ಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ ಮುಂದಿನ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಯಿತು.
ದಾಬಸ್ ಪೇಟೆ, ಸೋಲೂರು, ಹೊಸಕೋಟೆ, ಬಿಡದಿ, ರಾಮನಗರ ಭಾಗದಲ್ಲಿ ಜಮೀನು ಲಭ್ಯತೆ ಆಧಾರದಲ್ಲಿ ಟೌನ್ ಶಿಪ್ ನಿರ್ಮಾಣ ಕ್ಕೆ ತೀರ್ಮಾನ ಮಾಡಲಾಗಿದ್ದು, ಪೂರ್ವಭಾವಿಯಾಗಿ ರೈತರ ಅದಾಲತ್ ನಡೆಸೋಣ ನಂತರ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳೋಣ ಎಂದು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಶಾಸಕರಾದ ಶರತ್ ಬಚ್ಚೆಗೌಡ, ಮಾಗಡಿ ಬಾಲಕೃಷ್ಣ, ನೆಲಮಂಗಲ ಶ್ರೀನಿವಾಸ್, ದೊಡ್ಡಬಳ್ಳಾಪುರ ಧೀರಜ್ ಮುನಿರಾಜು, ರೈತರು ಜಮೀನು ಕೊಡಲು ಸ್ವಯಂ ಪ್ರೇರಿತ ರಾಗಿ ಮುಂದೆ ಬಂದು 50: 50 ಹಂಚಿಕೆ ಆಧಾರದಲ್ಲಿ ಒಪ್ಪಿದರೆ ನಮ್ಮ ವಿರೋಧ ಇಲ್ಲ ಎಂದು ಹೇಳಿದರು.
ಗೃಹ ಮಂಡಳಿ ವತಿಯಿಂದ ಐದು ಕಡೆ ತಲಾ ಎರಡು ಸಾವಿರ ಎಕರೆ ಜಾಗದಲ್ಲಿ ಟೌನ್ ಶಿಪ್ ನಿರ್ಮಾಣ ಕ್ಕೆ ತೀರ್ಮಾನ ಮಾಡಲಾಗಿದ್ದು ಆದಷ್ಟು ಬೇಗ ಈ ಸಂಬಂಧ ಪ್ರಕ್ರಿಯೆ ಪೂರ್ಣ ಗೊಳಿಸಲು ಸಚಿವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇ ಗೌಡ, ಆಯುಕ್ತ ರಾದ ಕವಿತಾ ಮಣ್ಣಿಕೇರಿ, ಮುಖ್ಯ ಎಂಜಿನಿಯರ್ ರವಿಕುಮಾರ್ ಉಪಸ್ಥಿತರಿದ್ದರು.
ಡಾ.ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ಬಿಜೆಪಿ ಸತ್ಯ ಶೋಧನಾ ಸಮಿತಿ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ರವಿಕುಮಾರ್ ಒತ್ತಾಯ
BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike