ದಾವಣಗೆರೆ ; ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗೆ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಆಭ್ಯರ್ಥಿಗಳಿಂದ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 9 ವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.
ಸೆ.27ರಂದು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
ದಾವಣಗೆರೆ ಸೆ.13 (ಕರ್ನಾಟಕ ವಾರ್ತೆ) ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.
ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 3 ಗಂಟೆ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಸದಸ್ಯರ ಸಹಿ ದಾಖಲಿಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
GOOD NEWS: ‘ಮಹಾನಗರ ಪಾಲಿಕೆಯ ನೌಕರ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘7ನೇ ವೇತನ’ ಜಾರಿಗೊಳಿಸಿ ಆದೇಶ
BIG NEWS: ಕರ್ನಾಟಕದಲ್ಲಿ ‘ಮಹಿಳಾ ಆರೋಗ್ಯ ಸಿಬ್ಬಂದಿ’ಯ ಸುರಕ್ಷತೆಗೆ ಬರಲಿದೆ ‘AI ತಂತ್ರಜ್ಞಾನ’ದ ಭದ್ರತಾ ವ್ಯವಸ್ಥೆ