ರಾಮನಗರ: ರಾಜ್ಯದ ಜನರಿಗೆ ಮತ್ತೆ ಶಾಕ್ ಎನ್ನುವಂತೆ ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಬಿಗ್ ಶಾಕ್ ನೀಡಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರೈತರಿಗೆ ಅನುಕೂಲವಾಗಲೆಂದು ನಂದಿನ ಹಾಲಿನ ದರವನ್ನು ಹೆಚ್ಚಳ ಮಾಡಲಾಗುತ್ತದೆ. ಇದು ನಿಮಗಾಗಿ ಸರ್ಕಾರ ಮಾಡುತ್ತಿರುವಂತ ಏರಿಕೆಯಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಪ್ರತಿ ಲೀಟರ್ ಹಾಲಿನ ಬೆಲೆಯನ್ನು 5 ರೂ. ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರತಿ ಲೀಟರ್ ಹಾಲಿನ ದರವನ್ನು 5 ರೂ.ವರೆಗೆ ಹೆಚ್ಚಳ ಮಾಡುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಜೊತೆಗೆ ಸಭೆ ನಡೆಸಲಾಗುತ್ತದೆ. ಆ ಸಭೆಯ ಬಳಿಕ ಹಾಲಿನ ದರ ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ನೀವೆಲ್ಲ ನಮ್ಮ ಪರವಾಗಿದ್ದರೇ ಹಾಲಿನ ದರ ಹೆಚ್ಚಳ ಮಾಡಲಾಗುತ್ತದೆ ಎಂದರು. ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೊಮ್ಮೆ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ.