ಬೆಂಗಳೂರು: ಶಾಸಕ ಮುನಿರತ್ನ ವಿರುದ್ದ ವೈಯಾಲಿಕಾವಲ್ ಪೋಲಿಸ್ ಠಾಣೆಯಲ್ಲಿ ಎರಡು FIR ದಾಖಲಾಗಿದೆ.ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಒಂದು ಎಫ್ ಐಆರ್ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಜಾತಿ ನಿಂದನೆ ಆರೋಪದಡಿಯಲ್ಲಿ ಶಾಸಕರ ವಿರುದ್ದ ಮತ್ತೊಂದು ಎಫ್ ಐಆರ್ ದಾಖಲಾಗಿದೆ. ಜೀವ ಬೆದರಿಕೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದ್ದು ಅದರಲ್ಲಿ A1 ಮುನಿರತ್ನ ಆಗಿದ್ದಾರೆ.