ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಪೊರಕೆ ಹಿಡಿದು ಸೆಲ್ ಕ್ಲಿನ್ ಮಾಡುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್, ಜೈಲಿನಲ್ಲಿ ಪೊರಕೆ ಹಿಡಿದು ಸೆಲ್ ಕ್ಲಿನ್ ಮಾಡುತ್ತಿದ್ದಾರೆ. ಬಳ್ಳಾರಿ ಜೈಲಿಗೆ ಬಂದು 16 ದಿನಗಳ ಕಳೆದಿದ್ದು, ಜೈಲಿನಲ್ಲಿ ದರ್ಶನ್ ಬಟ್ಟೆ ತೊಳೆಯುವುದು, ಶೌಚಾಲಯ ಕ್ಲಿನ್ ಮಾಡುವುದು ಹಾಗೂ ಸೆಲ್ ನ ಕಸ ಗುಡಿಸುವುದು ಸೇರಿ ಎಲ್ಲಾ ಕೆಲಸಗಳನ್ನು ತಾವೇ ಮಾಡುತ್ತಿದ್ದಾರೆ. ಈ ಮೂಲಕ ಸ್ಟಾರ್ ಆಗಿದ್ ದರ್ಶನ್ ಈಗ ಸಾದಾ ಸೀದಾ ಕೈದಿಯಂತೆ ಇದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಜೈಲುಪಾಲಾಗಿದ್ದಾರೆ. ಇಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಸೆ/17 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ ಸೆ.17ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.