ಬೆಂಗಳೂರು : BMTC ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕರು-ಉಳಿಕೆ ಮೂಲ ವೃಂದ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 01.09.2024 ರಂದು BMTC ಸಂಸ್ಥೆಯಲ್ಲಿನ ನಿರ್ವಾಹಕರು-ಉಳಿಕೆ ಮೂಲ ವೃಂದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿರುತ್ತದೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 02.09.2024 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 05.09.2024 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಉತ್ತರಗಳನ್ನು ದಿನಾಂಕ 11.09.2024 ರಂದು ಪ್ರಕಟಿಸಲಾಗಿರುತ್ತದೆ.
ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಿಂಕ್ ಮೂಲಕ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18.09.2024 ಸಂಜೆ 5.30 ರೊಳಗೆ ಪೂರಕ ದಾಖಲೆಗಳೊಂದಿಗೆ ಅಂಚೆ ಮೂಲಕ / ಖುದ್ದಾಗಿ ಸಲ್ಲಿಸತಕ್ಕದ್ದು. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.