ಬೆಂಗಳೂರು : ಮಹಿಳಾ ವೈದ್ಯಕೀಯ ಸಿಬ್ಬಂದಿಯ ಭದ್ರತೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಎಲ್ಲಾ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ಧಿಮತ್ತೆ ಆಧಾರಿ ಭದ್ರತಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು,ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.









