Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕದ ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

15/03/2026 4:41 PM

BREAKING: ತಮಿಳುನಾಡು ವಿಧಾನಸಭಾ ಚುನಾವಣೆ 2026: ಏಪ್ರಿಲ್ 23ಕ್ಕೆ ಮತದಾನ; 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ

15/03/2026 4:38 PM

BREAKING: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2026: ಎರಡು ಹಂತಗಳಲ್ಲಿ ಮತದಾನ; ಮೇ 4ಕ್ಕೆ ಫಲಿತಾಂಶ

15/03/2026 4:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪ್ರಜಾಪ್ರಭುತ್ವ ದಿನಾಚರಣೆ : ವಿಶ್ವದಾಖಲೆಯ `ಮಾನವ ಸರಪಳಿ’ ಕಾರ್ಯಕ್ರಮಕ್ಕೆ `CM’ ಸಿದ್ದರಾಮಯ್ಯ ಚಾಲನೆ
KARNATAKA

BREAKING : ಪ್ರಜಾಪ್ರಭುತ್ವ ದಿನಾಚರಣೆ : ವಿಶ್ವದಾಖಲೆಯ `ಮಾನವ ಸರಪಳಿ’ ಕಾರ್ಯಕ್ರಮಕ್ಕೆ `CM’ ಸಿದ್ದರಾಮಯ್ಯ ಚಾಲನೆ

By kannadanewsnow5715/09/2024 10:30 AM

ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ್ದಾರೆ. ಆನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಗಳ ಸಮಸ್ತ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಆ ಪ್ರದೇಶದಲ್ಲೇ ಗಿಡ ನೆಡುತ್ತಾರೆ. ಹೀಗಾಗಿ ಪ್ರತಿ ಜಿಲ್ಲೆ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಕೆಲವರು ಸಮುದ್ರದಲ್ಲೇ ನಿಂತು ಮನವ ಸರಪಳಿ ರಚಿಸಲಿದ್ದಾರೆ.

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ ಬೀದರ್ ಜಿಲ್ಲೆಯಿಂದ ಚಾಮರಾಜನಗರದ ವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ ನಿರ್ಮಿಸಲಿದ್ದಾರೆ.

ಇದೇವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಜಾಗೃತಿ ಮೂಡಿಸಲಿದ್ದಾರೆ. ಹಾಗೆಯೇ, ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನೂ ನೆಡಲಿದ್ದಾರೆ. ಈ ಮೂಲಕ ಅಂದು ರಾಜ್ಯಾದ್ಯಂತ 10ಲಕ್ಷ ಗಿಡಗಳನ್ನು ಹಾಕಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಇಡೀ ಕಾರ್ಯಕ್ರಮಕ್ಕಾಗಿ ಶ್ರಮಿಸುತ್ತಿದ್ದು, ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ ಹೆಚ್ಚಿನ ಆಸಕ್ತಿ ವಹಿಸಿ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಲಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡಲಿದೆ. ನಂತರ ಕಾರ್ಯಕ್ರಮ ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ. ಇದೆಲ್ಲದಕ್ಕೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರು ತಮ್ಮದೇ ರೀತಿಯಲ್ಲಿ ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಹಾಗೆಯೇ ಡ್ರೋನ್ ಚಿತ್ರೀಕರಣ ಹಾಗೂ ಪ್ರತಿ ಜಿಲ್ಲೆಯ ತಾಲೂಕುಗಳ ಮಾಹಿತಿಗಳು ಕ್ಷಣಕ್ಷಣದಲ್ಲಿ ಲಭ್ಯವಾಗಿ ಆಯೋಜಕರ ನಡುವೆ ಸಂಪೂರ್ಣ ಸಮನ್ವಯದೊಂದಿಗೆ ನಡೆಯುವಂತೆ ಮಾಡುವ ವಿಶೇಷ ಸುಧಾರಿತ ತಂತ್ರಜ್ಞಾನದ ಜಾಲವೊಂದರ ಸಿದ್ಧತೆ ನಡೆಸಿದ್ದಾರೆ.

ಈ ವಿಶೇಷ ಮಾನವ ಸರಪಳಿ ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ಹಾದು ಹೋಗಲಿದ್ದು, ಎಲ್ಲಾ ಹಳ್ಳಿಗಳಲ್ಲೂ ಇದೊಂದು ಹಬ್ಬದಂತೆ ಆಚರಿಸುವಂತೆ ಮಾಡಲು ಸರಕಾರ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದೆ.

3 ಕೋಟಿ ಜನರ ಬೆಂಬಲದ ನಿರೀಕ್ಷೆ:

ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ ಅಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ ಇದರ ಮೌಲ್ಯವನ್ನು ಹೆಚ್ಚು ಪ್ರಚಾರ ಮಾಡಿ ವಿಶ್ವ ಮಟ್ಟದಲ್ಲಿ ಸಾರುವ ಪ್ರಯತ್ನಕ್ಕೆ ಸರಕಾರ ಈ ಹಿಂದೆಯೇ ಕೈ ಹಾಕಿತ್ತು. ಹೀಗಾಗಿ ಕಳೆದ ವರ್ಷ 2023 ಸೆ.15ರಂದು ರಾಜ್ಯಾದ್ಯಂತ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ನಡೆಸಲಾಗಿತ್ತು. ಇದರಲ್ಲಿ ಸುಮಾರು 2.3 ಕೋಟಿ ಭಾಗವಹಿಸಿ ಸರಕಾರಕ್ಕೆ ಆಶ್ಚರ್ಯ ಉಂಟು ಮಾಡಿದ್ದರು. ಇದರಿಂದ ಸ್ಫೂರ್ತಿ ಪಡೆದ ಸರಕಾರ ಈ ಬಾರಿ 25 ಲಕ್ಷ ಜನರು ರಾಜ್ಯದುದ್ದಕ್ಕೂ ನಿಂತು ಸಂವಿಧಾನ ಓದುವಂತೆ ಮಾಡುತ್ತಿದೆ. ಹೀಗಾಗಿ ಇದರಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸುಮಾರು 3 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಇದರಿಂದ ಇಡೀ ವಿಶ್ವ ಕರ್ನಾಕದ ಕಡೆ ನೋಡುವಂತಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

BREAKING : ಪ್ರಜಾಪ್ರಭುತ್ವ ದಿನಾಚರಣೆ : ವಿಶ್ವದಾಖಲೆಯ `ಮಾನವ ಸರಪಳಿ' ಕಾರ್ಯಕ್ರಮಕ್ಕೆ `CM' ಸಿದ್ದರಾಮಯ್ಯ ಚಾಲನೆ BREAKING: CM Siddaramaiah launches world-record 'human chain' programme on Democracy Day
Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

15/03/2026 3:38 PM1 Min Read

BIG NEWS : ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನ : ಪಾಕ್ ಉಗ್ರನ ಹತ್ಯೆಗೈದ ಭಾರತೀಯ ಸೇನೆ

15/03/2026 3:29 PM1 Min Read

ಚಾಮರಾಜನಗರದಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

15/03/2026 3:24 PM1 Min Read
Recent News

BREAKING: ಕರ್ನಾಟಕದ ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

15/03/2026 4:41 PM

BREAKING: ತಮಿಳುನಾಡು ವಿಧಾನಸಭಾ ಚುನಾವಣೆ 2026: ಏಪ್ರಿಲ್ 23ಕ್ಕೆ ಮತದಾನ; 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ

15/03/2026 4:38 PM

BREAKING: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2026: ಎರಡು ಹಂತಗಳಲ್ಲಿ ಮತದಾನ; ಮೇ 4ಕ್ಕೆ ಫಲಿತಾಂಶ

15/03/2026 4:34 PM

BREAKING : ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಮುಹೂರ್ತ ಫಿಕ್ಸ್: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ರಿಸಲ್ಟ್!

15/03/2026 4:32 PM
State News
KARNATAKA

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

By kannadanewsnow0915/03/2026 3:38 PM KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಅಭಾವ ಕಾಣಿಸಿಕೊಂಡ ಬೆನ್ನಲ್ಲೇ, ಪರಿಸ್ಥಿತಿಯ ದುರುಪಯೋಗ…

BIG NEWS : ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನ : ಪಾಕ್ ಉಗ್ರನ ಹತ್ಯೆಗೈದ ಭಾರತೀಯ ಸೇನೆ

15/03/2026 3:29 PM

ಚಾಮರಾಜನಗರದಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

15/03/2026 3:24 PM

ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ ಈ LPG ಬುಕಿಂಗ್ ಆ್ಯಪ್; ಚ್ಯಾಟ್ ಜಿಪಿಟಿ, ಫ್ಲಿಪ್‌ಕಾರ್ಟ್‌ ಹಿಂದಿಕ್ಕಿ ಹೊಸ ದಾಖಲೆ!

15/03/2026 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.