Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ | Operation Sindoor Anniversary

ಕೊಲ್ಲಿ ಬಿಕ್ಕಟ್ಟು: ಹಾರ್ಮುಜ್ ಜಲಸಂಧಿಯಿಂದ 11 ಭಾರತೀಯ ಹಡಗುಗಳು ಸುರಕ್ಷಿತವಾಗಿ ಹೊರಕ್ಕೆ; ಇನ್ನೂ 13 ಹಡಗುಗಳು ಕೊಲ್ಲಿಯಲ್ಲೇ ಬಾಕಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ : ಹೀಗಿದೆ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು
KARNATAKA

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ : ಹೀಗಿದೆ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

By kannadanewsnow57

ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿ ಮಾತನಾಡಿದ್ದಾರೆ.

ಹೀಗಿದೆ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ.

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ.

ಬುದ್ಧ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತವಾಗಿದೆ.

1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣ ಅತ್ಯಂತ ಅರ್ಥಪೂರ್ಣವಾಗಿದೆ. ನಾವೀಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಜನರಿಗೆ ಕೇವಲ ರಾಜಕೀಯ ಸ್ವಾತಂತ್ರ್ಯ ನೀಡಿದರೆ ಸಾಲದು, ಅದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ನೀಡಬೇಕು. ಇಲ್ಲದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆ ಅವರು ನೀಡಿದ್ದರು. ಹೀಗಾಗಿ ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರಾತಮ್ಯವು ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ.

ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ದಿನ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ, ಪಾಲಿಸುವ ಪ್ರಯತ್ನ‌ ಮುನ್ನಡೆಸಿದ್ದೇವೆ.

ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು.

ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ.

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಬೇಕು. ಬನ್ನಿ ಎದ್ದು ನಿಲ್ಲೋಣ.

ಏಕತೆ ಭಜನೆ ಮಾಡುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು. ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರಿಗೆ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ.

ಈ ಬಿಜೆಪಿ ಮತ್ತು ಇವರ ಜೊತೆಗಿರುವ ವಿಚ್ಚಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು.

20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ.

ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಬ್ಬ, ಪೌರ ಕಾರ್ಮಿಕರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಇಲ್ಲಿ ಹಾಜರಿದ್ದು, ಈ ದಿನದ ಮೆರುಗು ಹೆಚ್ಚಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

World Democratic Day: Here are the highlights of Cm Siddaramaiah's speech ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ : ಹೀಗಿದೆ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು
Share. Facebook Twitter LinkedIn WhatsApp Email

Related Posts

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

2 Mins Read

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

4 Mins Read

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

2 Mins Read
Recent News

BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ | Operation Sindoor Anniversary

ಕೊಲ್ಲಿ ಬಿಕ್ಕಟ್ಟು: ಹಾರ್ಮುಜ್ ಜಲಸಂಧಿಯಿಂದ 11 ಭಾರತೀಯ ಹಡಗುಗಳು ಸುರಕ್ಷಿತವಾಗಿ ಹೊರಕ್ಕೆ; ಇನ್ನೂ 13 ಹಡಗುಗಳು ಕೊಲ್ಲಿಯಲ್ಲೇ ಬಾಕಿ!

BREAKING: ತಮಿಳುನಾಡು ರಾಜಕೀಯ ಹೈಡ್ರಾಮಾ: ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೆ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ವಿಜಯ್ ನಿರ್ಧಾರ!

State News
KARNATAKA

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow09 KARNATAKA 2 Mins Read

ಬೆಂಗಳೂರು: “ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು…

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.