ತುಮಕೂರು : ಇಂದು ತುಮಕೂರಿನಲ್ಲಿ ಎರಡು ಪ್ರತ್ಯೇಕ ಅಪಘಾತವಾಗಿದ್ದು, 7 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ತುಮಕೂರು ಜಿಲ್ಲೆಯ ಮಧುಗಿರಿ ಹೊರವಲಯದ ಜಡೆಗೊಂಡನಹಳ್ಳಿಯಲ್ಲಿ ಎರಡು ಬೈಕ್ ಗಳ ಮಧ್ಯ ಮುಖಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ತೆರೆಯೂರಿನ ಗೌತಮ್ (26) ಬಂದರೆಯ ಅನಿಲ್ (26) ಸಾವನಪ್ಪಿದ್ದಾರೆ. ಅಪಘಾತದ ಕುರಿತು ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಡಿವೈಡರ್ ಗೆ ಹುಂಡೈ ಕಾರು ಡಿಕ್ಕಿ ಹೊಡೆದು ಶಾಲಿನಿ (7) ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಾಲೂಕಿನಲ್ಲಿ ಈ ಒಂದು ಅಪಘಾತ ನಡೆದಿದೆ. ಬಸವೇಶ್ (16) ಗೆ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.