ತುಮಕೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಶೀಘ್ರವೇ ನಂದಿನಿ ಹಾಲಿನ ಪ್ರತಿ ಲೀಟರ್ ದರದಲ್ಲಿ ರೂ.5 ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಶೀಘ್ರದಲ್ಲೇ ಪ್ರತಿ ಲೀಟರ್ ಹಾಲಿನ ಮಾರಾಟ ದರವನ್ನು 5 ರೂ ಹೆಚ್ಚಳ ಮಾಡಲಾಗುತ್ತಿದೆ. ಏರಿಕೆಯ ಸಂಪೂರ್ಣ ಲಾಭವನ್ನು ರೈತರಿಗೆ ದೊರೆಕಿಸಿಕೊಡುವುದಾಗಿ ತಿಳಿಸಿದರು.
ಹಾಲಿನ ಮಾರಾಟ ದರ ಹೆಚ್ಚಳದಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೇ ಹಾಲಿನ ದರ ಏರಿಕೆ ಅನಿವಾರ್ಯವಾಗಿದೆ. ಹಾಲಿನ ದರ ಏರಿಕೆಯಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಲಾಭವಾಗಲಿದೆಯೇ ಹೊರತು, ರಾಜ್ಯ ಸರ್ಕಾರಕಕ್ಕೆ ಅಲ್ಲ ಎಂದರು.
ಇಡೀ ದೇಶದಲ್ಲಿ ರೈತರಿಂದ ಹೆಚ್ಚು ಬೆಲೆಗೆ ಹಾಲು ಖರೀದಿಸಿ, ಕಡಿಮೆ ಬೆಲೆಗೆ ಗ್ರಾಹಕರಿಗೆ ನೀಡುತ್ತಿರುವುದು ಕರ್ನಾಟಕದಲ್ಲಿ ಮಾತ್ರವೇ ಆಗಿದೆ. ಈ ಹಿನ್ನಲೆಯಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲಾಗುತ್ತಿದೆ. ಈ ಸಂಬಂಧ ಹಾಲು ಒಕ್ಕೂಟಗಳ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.
BREAKING: ಮಂಗಳೂರಲ್ಲಿ ಮಸೀದಿಯ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ: ಸ್ಥಳದಲ್ಲಿ ಬಿಗುವಿನ ವಾತಾವಣ