ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜುಲೈ, ಆಗಸ್ಟ್ ತಿಂಗಳ ಕಂತಿನ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಒಂದೆರಡು ದಿನಗಳಲ್ಲಿ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಸಚಿವರು ಹೇಳಿದರು. ಒಂದೂವರೆ ವರ್ಷದ ಹಿಂದಿನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, ಅಕ್ಟೋಬರ್ 1 ರಿಂದಲೇ ಗಟ್ಟಿ ಬೆಲ್ಲ ನೀಡುವುದಾಗಿ ಸಚಿವೆ ತಿಳಿಸಿದರು.