Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ 5,000 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ
KARNATAKA

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ 5,000 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ

By kannadanewsnow5717/09/2024 2:00 PM

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ (371 ಜೆ) ದೊರೆತು ಒಂದು ದಶಕ ಪೂರೈಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ₹5 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಹಿಂದಿನ ಯುಪಿಎ ಸರ್ಕಾರವು ಸಂವಿಧಾನ ತಿದ್ದುಪಡಿ ಮಾಡಿ, ವಿಶೇಷ ಪ್ರಾತಿನಿಧ್ಯ (371ಜೆ) ಕಲ್ಪಿಸಿದ ನಂತರ ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯ ಸಮಸ್ಯೆ ಹೆಚ್ಚು ಇದೆ. ಆರೋಗ್ಯವಂತ ಜನರು ದೇಶದ ಸಂಪತ್ತಾಗಿರುತ್ತಾರೆ. ಆದ್ದರಿಂದ ಈ ಭಾಗದ ಜನರ ಆರೋಗ್ಯ ಸುಧಾರಣೆಗಾಗಿ ಆರೋಗ್ಯ-ಆವಿಷ್ಕಾರ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ವಿವಿಧ ಹಂತದ ಆಸ್ಪತ್ರೆಗಳ ಕಾಮಗಾರಿಗಳನ್ನು ಆರೋಗ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಸಮರ್ಪಕ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನಲ್ಲಿ 220 ಕೋಟಿ ರೂ. ಗಳ ವಿಶೇಷ ಅನುದಾನವನ್ನು ಮಂಡಳಿ ಒದಗಿಸುತ್ತಿದೆ. ಕಲ್ಯಾಣ ಕರ್ನಾಟಕದ ಆಸ್ಪತ್ರೆಗಳಿಗೆ 50 ಹೊಸ ಆಂಬ್ಯುಲೆನ್ಸ್‍ಗಳನ್ನು ಒದಗಿಸಲಾಗುತ್ತಿದೆ ಎಂದರು.

ಕೆ.ಕೆ.ಆರ್.ಡಿ.ಬಿ. ಮಂಡಳಿಯ ಸಂಪೂರ್ಣ ಆರ್ಥಿಕ ನೆರವಿನೊಂದಿಗೆ ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಆಸ್ಪತ್ರೆಯ ಶಾಖಾ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು 262 ಕೋಟಿ ರೂ. ಪರಿಷ್ಕøತ ಅಂದಾಜಿಗೆ ಈಗಾಗಲೆ ಅನುಮೋದನೆ ನೀಡಿದ್ದು, ಅಂತಿಮ ಘಟ್ಟದ ಕೆಲಸ ಭರದಿಂದ ಸಾಗಿದೆ. ಶೀಘ್ರವೇ ಇದನ್ನು ಈ ಪ್ರದೇಶಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಕಲಬುರಗಿಯಲ್ಲಿ 221 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಯ ಮಕ್ಕಳ ಆರೋಗ್ಯ ಘಟಕ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿಯೇ 90 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು 72 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಗಳ ಸಾಮಥ್ರ್ಯದ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ನಿರ್ಮಿಸಲಾಗುತ್ತಿದ್ದು, ಈ ಮೂರು ಆಸ್ಪತ್ರೆಗಳ ಕಾಮಗಾರಿಗೆ ಈ ವರ್ಷ 75 ಕೋಟಿ ರೂ. ಅನುದಾನ ನೀಡಲು ಕೆ.ಕೆ.ಆರ್.ಡಿ.ಬಿ. ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಕಲಬುರಗಿ ನಗರದಲ್ಲಿ ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿಯೆ ಜಿಮ್ಸ್ ವೈದ್ಯಕೀಯ ಕಾಲೇಜು, ಜಯದೇವ ಆಸ್ಪತ್ರೆ, ಇತ್ತೀಚೆಗೆ ಟ್ರಾಮಾ ಸೆಂಟರ್‍ಗಳನ್ನು ಸ್ಥಾಪಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುತ್ತಿದೆ. ಇದಲ್ಲದೆ ಪ್ರಗತಿಯಲ್ಲಿರುವ 163 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹ ಶೀಘ್ರ ಸಾರ್ವಜನಿಕರ ಬಳಕೆಗೆ ಬರಲಿದೆ. 30 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆ ಸಾಮಥ್ರ್ಯದ ತೀವ್ರ ನಿಗಾ ಘಟಕ ಮತ್ತು 15.6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆ ಸಾಮಥ್ರ್ಯದ ಸುಟ್ಟ ಗಾಯಗಳ ಘಟಕಕ್ಕೆ ಇತ್ತೀಚೆಗೆ ಅಡಿಗಲ್ಲು ಹಾಕಲಾಗಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ (371 ಜೆ) ದೊರೆತು ಒಂದು ದಶಕ ಪೂರೈಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ₹5 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ.#KalyanaKranthi #KalyanaKarnatakaShining @CMofKarnataka @siddaramaiah pic.twitter.com/wJnE9JtBJK

— DIPR Karnataka (@KarnatakaVarthe) September 17, 2024

000 crore for the development of 'Kalyana Karnataka'. Reservation: CM Siddaramaiah 000 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ The state government has allocated Rs 5 ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ' ಅಭಿವೃದ್ಧಿಗೆ 5
Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.