ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ನಡೆದಿದ್ದು, ವೃದ್ಧೆ ಒಬ್ಬರು ಕ್ಯಾನ್ಸರ್ ಇಂದ ಬಳಲುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದು, ತಾವು ಇದ್ದ ಅಪಾರ್ಟ್ಮೆಂಟ್ ನ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಇಂದ ಜಿಗಿದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಟ್ಟಡದ 16ನೇ ಮಹಡಿಯಿಂದ ಜಿಗಿದು ಜಯಲಕ್ಷ್ಮಮ್ಮ (68) ಆತ್ಮಹತ್ಯೆ ಮಾಡಿಕೊಂಡಿರುವ ವೃದ್ದೆ ಎಂದು ತಿಳಿದುಬಂದಿದೆ.ಕೆಲವು ವರ್ಷಗಳಿಂದ ಜಯಲಕ್ಷ್ಮಮ್ಮ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು.
ಪುತ್ರ, ಸೊಸೆ ಕೆಲಸಕ್ಕೆ ಹೋದ ವೇಳೆ ವೃದ್ಧಿಯ ಜಯಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.