ದಕ್ಷಿಣಕನ್ನಡ : ಧರ್ಮ ನಿಂದನೆ ಪ್ರಚೋದನಕಾರಿ ಭಾಷಣ ಹಾಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೌದು ಸೆಪ್ಟೆಂಬರ್ 16ರಂದು ಬಿಸಿ ರೋಡಿನ ದೇವಸ್ಥಾನ ಒಂದರ ಮುಂಭಾಗದಲ್ಲಿ ಶರಣ್ ಪಂಪ್ವೆಲ್, ಭಾರತ್ ಕುಮ್ದೇಲು ಪ್ರಚೋದನಕಾರಿಯಾದಂತಹ ಭಾಷಣ ಮಾಡಿದ್ದು ಅಲ್ಲದೆ ತಾವು ಮಾತನಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ನೆಮ್ಮದಿ ಕದಡುವಂತಹ ಕೆಲಸ ಮಾಡಿದ ಕಾಗೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.
ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಬಿ.ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನೂ ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ ಮೇಲೆ ಕಾನೂನು ಕ್ರಮ ಜರಗಿಸುವಂತೆ ಬಂಟ್ವಾಳ ನಿವಾಸಿ ಮಹಮ್ಮದ್ ನವಾಜ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು ಈತನ ವಿರುದ್ಧವೂ ದೂರು ದಾಖಲಾಗಿದೆ.