ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಅಕ್ಟೋಬರ್.3ರಂದು ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಈ ಬಗ್ಗೆ ಕೆಇಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್.3ರಂದು ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದಿದೆ.
ಅಂದಹಾಗೇ ಸೆಪ್ಟೆಂಬರ್.22ರಂದು ಪಿಎಸ್ಐ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿತ್ತು. ಆದರೇ ಅದೇ ದಿನಾಂಕದಂದು ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ರಾಜ್ಯ ಸರ್ಕಾರದಿಂದ ಗ್ರೂಪ್-ಸಿ ಮತ್ತು ಬಿ ಹುದ್ದೆಗಳಿಗೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶ ಮಾಡಿದ ಕಾರಣ, ಮುಂದೂಡಲಾಗಿದೆ.
ಇನ್ನೂ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್ಸಿಯಿಂದ ಸೆಪ್ಟೆಂಬರ್.19ರ ನಾಳೆಯಿಂದ 28ರವರೆಗೆ ಮತ್ತೊಂದು ಅವಕಾಶವನ್ನು ನೀಡಲಾಗಿದೆ.
ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha