ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಆರೋಪದ ಅಡಿಯಲ್ಲಿ ಬಂಧಿತರಾಗಿರುವ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಾಯ್ಸ್ ಸ್ಯಾಂಪಲ್ ಎಫ್ ಎಸ ಎಲ್ ಗೆ ಕಳಿಸಲಾಗಿದ್ದು ಒಂದು ವೇಳೆ ಮುನಿರತ್ನ ವೈಸ್ ಮ್ಯಾಚ್ ಆದರೆ ಅವರ ವಿರುದ್ಧ ಸೂಕ್ತವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಪ್ರಕರಣದ ಕುರಿತಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ ಪರಮೇಶ್ವರ್,ಮುನಿರತ್ನ ಅವರನ್ನ ಏಕಾಏಕಿ ಬಂಧನ ಮಾಡಿಲ್ಲ. ದೂರು ದಾಖಲಾದ ಹಿನ್ನೆಲೆ ಬಂಧನ ಮಾಡಲಾಗಿದೆ. ವಾಯ್ಸ್ ರೆಕಾರ್ಡ್ ಕೂಡ ಪಡೆದಿದ್ದಾರೆ. ಮುನಿರತ್ನ ವಾಯ್ಸ್ ಸ್ಯಾಂಪಲ್ ಕೂಡ ಪಡೆದು ತನಿಖೆ ಆಗ್ತಿದೆ. ಪ್ರೂವ್ ಆದ್ರೆ ಶಿಕ್ಷೆ ಆಗುತ್ತೆ. ಅಲ್ಲದೇ ಶಾಸಕ ಚೆನ್ನಾರೆಡ್ಡಿ ಮೇಲೆ ಆರೋಪ ಕೇಳಿಬಂದಿದ್ದು, ಅವರ ಮೇಲೂ ಕ್ರಮ ಆಗುತ್ತೆ ಎಂದಿದ್ದಾರೆ.
ಇನ್ನೂ ನಾಗಮಂಗಲ ಗಲಭೆ ವಿಚಾರ ಕುರಿತು ಮಾತನಾಡಿದ ಪರಮೇಶ್ವರ್, ನಾಗಮಂಗಲ ಪ್ರಕರಣವನ್ನೇ ದೊಡ್ಡ ವಿಷಯ ಮಾಡಲು ಬಿಜೆಪಿಯವ್ರು ಮಾತಾಡಿಕೊಂಡಿದ್ದಾರೆ. ನಾವು ಕಾನೂನು ಪ್ರಕಾರ ಮುಲಾಜಿಲ್ಲದೇ ಕ್ರಮ ತಗೋತಿದ್ದೀವಿ. ಆದ್ರೆ ಬಿಜೆಪಿಯವ್ರು ದಿನಕ್ಕೊಂದು ಹೇಳಿಕೆ ಕೊಡ್ತಿದ್ದಾರೆ. ಆರೀತಿ ದಿನಕ್ಕೊಬ್ಬರು ಒಂದೊಂದು ಹೇಳಿಕೆ ಕೊಡಬೇಕು ಅಂತ ಅವರು ಡಿಸೈನ್ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.