ಕಲಬುರ್ಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ ಹಾಗಾಗಿ ಎಐಸಿಸಿ ಅಧ್ಯಕ್ಷರನ್ನು ಓಲೈಸಲು ಕಲ್ಬುರ್ಗಿಯಲ್ಲಿ ಸಂಪುಟ ಸಭೆ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪೋಟಕವಾದ ಹೇಳಿಕೆ ನೀಡಿದರು.
ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಬುರ್ಗಿಯಲ್ಲಿ ಸಿಎಂ ಸಚಿವ ಸಂಪುಟ ಸಭೆ ನಡೆಸಿದ ವಿಚಾರವಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಕಲಬುರ್ಗಿ ನೆನಪಾಗಿರಲಿಲ್ಲ ನಿನ್ನೆ ಸಚಿವ ಸಂಪುಟದಲ್ಲಿ ಯಾವುದೇ ಹೊಸ ವಿಚಾರವನ್ನು ಹೇಳಿಲ್ಲ.
ಕೆಕೆಆರ್‌ಡಿಪಿ ಗೆ ಬಜೆಟ್ ನಲ್ಲಿ 5,000 ಕೋಟಿ ಇಟ್ಟಿದ್ದೇನೆ ಹೇಳಿದ್ದಾರೆ ಬೆಂಗಳೂರು ಮೈಸೂರು ಮುಖ್ಯಮಂತ್ರಿ ಅಂತ ಜನ ಹೇಳುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ. ಎಐಸಿಸಿ ಅಧ್ಯಕ್ಷರನ್ನು ಓಲೈಸಲು ಅಲ್ಲಿ ಸಂಪುಟ ಸಭೆ ಮಾಡಿದ್ದಾರೆ ಎಂದು ಕಲ್ಬುರ್ಗಿಯಲ್ಲಿ ವಿಜೇಂದ್ರ ಹೇಳಿಕೆ ನೀಡಿದರು.